ನವದೆಹಲಿ : ಕಳೆದ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಒಂದು ಲಕ್ಷ ಮತಗಳ್ಳತನ ಆಗಿದೆ ಎಂದು ಲೋಕಸಭೆಯ ವಿಪಕ್ಷ ನಾಯಕರ ರಾಹುಲ್ ಗಾಂಧಿ ಗಂಭೀರವಾಗಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಮತಗಳ್ಳತನ ಆರೋಪ ಮಾಡಿದಂತ ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರಿಗೆ ನಿನ್ನೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ನೋಟಿಸ್ ಜಾರಿಗೊಳಿಸಿದೆ.
ಇದೀಗ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಇದೇ ವಿಚಾರವಾಗಿ ಮತ್ತೆರಡು ನೋಟಿಸ್ ನೀಡಲಾಗಿದೆ. ಮಹಾರಾಷ್ಟ್ರ ಮತ್ತು ಹರಿಯಾಣ ಚುನಾವಣಾ ಆಯೋಗದಿಂದ ನೋಟಿಸ್ ನೀಡಲಾಗಿದೆ. ದಾಖಲೆಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಕೋರಿ ರಾಹುಲ್ ಗಾಂಧಿಗೆ ಇದೀಗ ಮತ್ತೆ ಎರಡು ನೋಟಿಸ್ ನೀಡಲಾಗಿದೆ. ಈಗಾಗಲೇ ನಿನ್ನೆ ಕರ್ನಾಟಕ ಚುನಾವಣೆ ಆಯೋಗ ರಾಹುಲ್ ಗಾಂಧಿಗೆ ಸ್ಪಷ್ಟನೆ ನೀಡುವಂತೆ ನೋಟಿಸ್ ನೀಡಿತ್ತು.