ಬೆಂಗಳೂರು: ಧರ್ಮಸ್ಥಳದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿರುವ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಕ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದಾಗಿ ದೂರುದಾರ ತಪ್ಪೊಪ್ಪಿಗೆ ಹೇಳಿಕೆ ಹಿನ್ನೆಲೆಯಲ್ಲಿ ಎಸ್ ಐಟಿ ತಂಡ ತನಿಖೆ ಚುರುಕುಗೊಳಿಸಿದೆ. ದೂರುದಾರ ತೋರಿಸುತ್ತಿರುವ ವಿವಿಧ ಜಾಗಗಳಲ್ಲಿ ಮಣ್ಣು ಅಗೆದು ಅಸ್ಥಿಪಂಜರಕ್ಕಾಗಿ ಶೋಧ ನಡೆಸಲಾಗುತ್ತಿದೆ. ಈ ನಡುವೆ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಕ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ರೀತಿ ಅಪಪ್ರಚಾರ ಮಾಡುತ್ತಿರುವವರ ಉದ್ದೇಶವನ್ನು ಬಯಲಿಗೆಳೆಯಬೇಕು. ಅಪಪ್ರಚಾರ ಮಾಡುತ್ತಿರುವವರನ್ನು ಕೂಡಲೇ ಬಂಧಿಸಬೇಕು ಎಂದು ಕೊಡಗು, ಉಡುಪಿ ಧಾರವಾಡ, ಶಿವಮೊಗ್ಗ, ಮಂಡ್ಯ, ಮೈಸೂರು ಸೇರಿದಂತೆ ಹಲವೆಡೆ ಜನರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಅಪಪ್ರಚಾರ ನಡೆಸುವ ಮೂಲಕ ಧರ್ಮಸ್ಥ ಕ್ಷೇತ್ರದ ಬಗ್ಗೆ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಲಾಗುತ್ತಿದೆ ಎಂದು ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.