ಬೆಂಗಳೂರು : ಹೈಕಮಾಂಡ್ ನೀಡುವ ಸೂಚನೆ ಹಿನ್ನೆಲೆಯಲ್ಲಿ ಇಂದು ಸಚಿವ ಸ್ಥಾನಕ್ಕೆ ಸಹಕಾರ ಸಚಿವ ರಾಜಣ್ಣ ರಾಜೀನಾಮೆ ನೀಡಿಲಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಆತ್ಮೀಯ ಬಳಗದಲ್ಲಿ ಗುರುತಿಸಿಕೊಂಡಿರುವ ಅವರು ಸದ್ಯ ತುಮಕೂರು ಜಿಲ್ಲೆ ಮಧುಗಿರಿ ವಿಧಾನಸಭಾದ ಶಾಸಕರಾಗಿದ್ದಾರೆ. ಹೈಕಮಾಂಡ್ ಸೂಚನೆ ಹಿನ್ನಲೆ ಅವರು ರಾಜೀನಾಮೆ ನೀಡಿಲಿದ್ದಾರೆ ಎನ್ನಲಾಗಿದೆ.
ಇದೀಗ ಈ ವಿಚಾರವಾಗಿ ಸಿದ್ದರಾಮಯ್ಯ ಅವರಿಗೆ ಸಚಿವ ಸಚಿವ ಕೆ.ಎನ್ ರಾಜಣ್ಣ ಪತ್ರ ಸಲ್ಲಿಸಿದ್ದಾರೆ. ಹೈಕಮಾಂಡ್ ಸೂಚನೆಯ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಕೆನರಾಜಣ್ಣ ಅವರಿಂದ ರಾಜೀನಾಮೆ ಪತ್ರವನ್ನು ಅಧಿಕೃತವಾಗಿ ಸ್ವೀಕರಿಸಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಕಚೇರಿಯಲ್ಲಿ ಕೆ.ಎನ್ ರಾಜಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.