ಬೆಂಗಳೂರು : ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಇಂದು ಸಚಿವ ಸ್ಥಾನಕ್ಕೆ ಸಹಕಾರ ಸಚಿವ ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಆತ್ಮೀಯ ಬಳಗದಲ್ಲಿ ಗುರುತಿಸಿಕೊಂಡಿರುವ ಅವರು ಸದ್ಯ ತುಮಕೂರು ಜಿಲ್ಲೆ ಮಧುಗಿರಿ ವಿಧಾನಸಭಾದ ಶಾಸಕರಾಗಿದ್ದಾರೆ. ಹೈಕಮಾಂಡ್ ಸೂಚನೆ ಹಿನ್ನಲೆ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ನೀಡಿದ್ದಾರೆ.
ಇದೀಗ ಈ ವಿಚಾರವಾಗಿ ಸಿದ್ದರಾಮಯ್ಯ ಅವರಿಗೆ ಸಚಿವರಕ್ಕೆ ರಾಜಣ್ಣ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಹೈಕಮಾಂಡ್ ಸೂಚನೆಯ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಕೆ.ಎನ್ ರಾಜಣ್ಣ ಅವರಿಂದ ರಾಜೀನಾಮೆ ಪತ್ರವನ್ನು ಅಧಿಕೃತವಾಗಿ ಸ್ವೀಕರಿಸಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಕಚೇರಿಯಲ್ಲಿ ಕೆ.ಎನ್ ರಾಜಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕೆ ಎನ್ ರಾಜಣ್ಣ ಅವರು ಸಲ್ಲಿಸಿದ ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅಂಗೀಕರಿಸಿದ್ದಾರೆ. ಈ ವೇಳೆ ರಾಜ್ಯಪಾಲರಿಗೆ ರಾಜೀನಾಮೆ ಅಂಗೀಕಾರವನ್ನು ಸಿಎಂ ಸಿದ್ದರಾಮಯ್ಯ ರಾಜ್ಯಪಾಲರಿಗೆ ರವಾನಿಸಲಿದ್ದಾರೆ.