ಹುಬ್ಬಳ್ಳಿ: ಸ್ವಾತಂತ್ರ್ಯ ದಿನಾಚರಣೆ ಮತ್ತು ನಂತರದ ನಿರಂತರ ರಜೆಯ ಪ್ರಯುಕ್ತ, ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಎಸ್ಎಸ್ಎಸ್ ಹುಬ್ಬಳ್ಳಿ ಮತ್ತು ತಮಿಳುನಾಡಿನ ಕಾರೈಕ್ಕುಡಿ ಜಂಕ್ಷನ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಓಡಿಸಲಿದೆ.
ರೈಲು ಸಂಖ್ಯೆ 07331 ಎಸ್ಎಸ್ಎಸ್ ಹುಬ್ಬಳ್ಳಿ – ಕಾರೈಕ್ಕುಡಿ ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ರೈಲು, ಆಗಸ್ಟ್ 14, 2025 ರಂದು (ಗುರುವಾರ) ಮಧ್ಯಾಹ್ನ 4:00 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು ಮರುದಿನ ಬೆಳಗ್ಗೆ 11:00 ಗಂಟೆಗೆ ಕಾರೈಕ್ಕುಡಿಯನ್ನು ತಲುಪಲಿದೆ. ವಾಪಸು, ರೈಲು ಸಂಖ್ಯೆ 07332 ಕಾರೈಕ್ಕುಡಿ ಜಂಕ್ಷನ್ – ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್ ಪ್ರೆಸ್ ರೈಲು, ಆಗಸ್ಟ್ 15, 2025 ರಂದು (ಶುಕ್ರವಾರ) ಸಂಜೆ 6:45 ಗಂಟೆಗೆ ಕಾರೈಕ್ಕುಡಿಯಿಂದ ಹೊರಟು ಮರುದಿನ ಮಧ್ಯಾಹ್ನ 2:40 ಗಂಟೆಗೆ ಹುಬ್ಬಳ್ಳಿಗೆ ಆಗಮಿಸುತ್ತದೆ.
ಈ ರೈಲು ಎರಡೂ ಮಾರ್ಗದಲ್ಲಿ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಎಸ್ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ನಮಕ್ಕಲ್, ಕರೂರು, ತಿರುಚ್ಚಿರಾಪಳ್ಳಿ ಮತ್ತು ಪುದುಕೊಟ್ಟೈ ನಿಲ್ದಾಣಗಳಲ್ಲಿ ನಿಲ್ಲಲಿದೆ.
ಈ ರೈಲು ಒಟ್ಟು 17 ಬೋಗಿಗಳನ್ನು ಹೊಂದಿದ್ದು, ಅವುಗಳಲ್ಲಿ 1 ಎಸಿ 2-ಟೈರ್, 1 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 3 ಸಾಮಾನ್ಯ ದರ್ಜೆ ಮತ್ತು 2 ಎಸ್ಎಲ್ಆರ್’ಡಿ ಬೋಗಿಗಳು ಇರಲಿವೆ.
BREAKING: ಸಚಿವ ಸಂಪುಟದಿಂದ ಕೆ.ಎನ್ ರಾಜಣ್ಣ ವಜಾಗೊಳಿಸಿ ರಾಜ್ಯಪಾಲರು ಅಧಿಕೃತ ಆದೇಶ
ಕರ್ನಾಟಕದಲ್ಲಿನ ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಇಷ್ಟು ಮಾತ್ರ ‘ಫೈರ್ ಸೇಫ್ಟಿ ಪರ್ಮಿಷನ್ ಮಾನದಂಡ’ ಪೂರ್ಣ