ಬೆಂಗಳೂರು: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರನ್ನಾಗಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿ ಗೌಡ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ದಿನಾಂಕ: 29.02.2024 ರಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಕ್ಕೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ನೇಮಿಸಿ ಆದೇಶಿಸಲಾಗಿದ್ದು, ಸದರಿ ಆದೇಶದ ಕ್ರಮ ಸಂಖ್ಯೆ:05 ರ ನಂತರ ಶ್ರೀ ದಿನೇಶ್ ಗೂಳಿಗೌಡ, ವಿಧಾನ ಪರಿಷತ್ ಸದಸ್ಯರು, ಇವರನ್ನು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸೇರ್ಪಡೆಗೊಳಿಸಿ ಆದೇಶಿಸಲಾಗಿದೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಸತ್ಯ ಹೇಳೋರಿಗೆ ಸ್ಥಳವಿಲ್ಲ: ಸಂಸದ ಬಸವರಾಜ ಬೊಮ್ಮಾಯಿ
BIG BREAKING: ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ | K.N.Rajanna resigns