ಬೆಂಗಳೂರು : ಅನುದಾನಿತ ಶಾಲೆಗಳ ಶಿಕ್ಷಕರಿಗೆ ರಿಲೀಫ್ ಸಿಕ್ಕಿದ್ದು, ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ಶೇ. 60ಕ್ಕಿಂತ ಕಡಿಮೆ ಫಲಿತಾಂಶ ಬಂದಿದ್ದರೆ ವಿಷಯ ಶಿಕ್ಷಕರ ವಾರ್ಷಿಕ ವೇತನ, ಬಡ್ತಿ ತಡೆಹಿಡಿಯುವ ಕ್ರಮ ಜಾರಿ ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಬಿಜೆಪಿಯ ಎಸ್.ವಿ. ಸಂಕನೂರು ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದ ಸಚಿವ ಮಧು ಬಂಗಾರಪ್ಪ ಅವರು, 2019ರಲ್ಲಿ ಹೊರಡಿಸಿದ ಆದೇಶ ವಾಪಸ್ ಪಡೆಯುವ ಬಗ್ಗೆ ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ.
ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ಶೇ. 60ಕ್ಕಿಂತ ಕಡಿಮೆ ಫಲಿತಾಂಶ ಬಂದಿದ್ದರೆ ವಿಷಯ ಶಿಕ್ಷಕರ ವಾರ್ಷಿಕ ವೇತನ, ಬಡ್ತಿ ತಡೆಹಿಡಿಯುವ, ಶಿಕ್ಷಕರ ವೇತನ ಅನುದಾನ ತಡೆಹಿಡಿಯುವ ಕ್ರಮ ಜಾರಿ ಮಾಡುವುದಿಲ್ಲ. ಈ ಸಂಬಂಧ 2019ರಲ್ಲಿ ಹೊರಡಿಸಿದ ಆದೇಶ ವಾಪಸ್ ಪಡೆಯುವ ಬಗ್ಗೆ ನಿರ್ಧರಿಸಲಾಗಿದೆ ಎಂದರು.