ರಾಜಸ್ಥಾನ : ರಾಜಸ್ಥಾನದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಸ್ಲೀಪರ್ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ, ಬಸ್ಗೆ ಬೆಂಕಿಗಾಹುತಿಯಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಜಾಲೋರ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಸ್ಲೀಪರ್ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಅಪಘಾತದ ಪರಿಣಾಮ ಬಸ್ ಕೆಲವೇ ಸೆಕೆಂಡುಗಳಲ್ಲಿ ಬೆಂಕಿ ಹೊತ್ತಿಕೊಂಡಿತು.
ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಬಸ್‌ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸುಟ್ಟಗಾಯಗಳಾಗಿದ್ದು, ಅವರನ್ನು ಪಕ್ಕದಲ್ಲಿದ್ದವರು ಹೇಗೋ ಹೊರಗೆಳೆದು ರಕ್ಷಿಸಿದ್ದಾರೆ. ಜಿಲ್ಲೆಯ ಸಂಚೋರ್ ಉಪವಿಭಾಗದ ರಾಷ್ಟ್ರೀಯ ಹೆದ್ದಾರಿ-68 ರಲ್ಲಿ ಈ ಅಪಘಾತ ಸಂಭವಿಸಿದೆ. ವಿಡಿಯೋದಲ್ಲಿ ಬಸ್ ಹೊತ್ತಿ ಉರಿಯುತ್ತಿರುವುದನ್ನು ಕಾಣಬಹುದು.