ಶಿವಮೊಗ್ಗ : ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ದಿ: 27-08-202025 ರಿಂದ 15-09-2025 ರವರೆಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಗೊಳಿಸಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿರುತ್ತಾರೆ.
ದಿ: 27-08-2025 ರಂದು ಗಣೇಶ ಹಬ್ಬದ ಪ್ರಯಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ, ನಂತರ ವಿವಿಧ ದಿನಗಳಂದು ವಿಸರ್ಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು ಆ.27 ರಿಂದ ಸೆ.15 ರವರೆಗೆ ಒಟ್ಟು 20 ದಿನಗಳ ಕಾಲ ಜಿಲ್ಲೆಯಲ್ಲಿ ಪ್ರಮುಖ, ಅತಿಸೂಕ್ಷ್ಮ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಿದ್ದಾರೆ. ಹಾಗೂ ದಿ:05-09-2025 ರಿಂದ 10-09-2025 ರವರೆಗೆ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬ ಆಚರಿಸಲಿದ್ದಾರೆ.
ಈ ಆಚರಣೆಗಳ ಸಂದರ್ಭದಲ್ಲಿ ಡಿಜೆ ಸಿಸ್ಟಂಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂಗಳ ಬಳಕೆಯನ್ನು ನಿಷೇಧಿಸಿ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮೆಟ್ರೋ ನಿಲ್ದಾಣಕ್ಕೆ ಮುನಿರತ್ನ ಹಣ ಕೊಟ್ಟರೆ, ಅವರ ಹೆಸರಿಡಲು ಸಿದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ
ಜುಲೈ 2025ರಲ್ಲಿ ಭಾರತದ ಚಿಲ್ಲರೆ ಹಣದುಬ್ಬರವು 8 ವರ್ಷಗಳ ಕನಿಷ್ಠ ಮಟ್ಟಕ್ಕೆ ಇಳಿಕೆ | India Retail Inflation