ಬೆಂಗಳೂರು : ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಶೀಘ್ರವೇ ಜಿ.ಪಂ, ತಾ.ಪಂ ಚುನಾವಣೆಗೆ ದಿನಾಂಕ ಘೋಷಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯದಲ್ಲಿ ಮಳೆಗಾಲದ ನಂತರ ಜಿಪಂ ಹಾಗೂ ತಾಪಂ ಚುನಾವಣೆ ನಡೆಸುವ ಕುರಿತು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಮಳೆಗಾಲದ ನಂತರ ಪ್ರತ್ಯೇಕ ಸಭೆ ನಡೆಸಿ ಸಿದ್ಧತೆ ಹಾಗೂ ದಿನಾಂಕ ನಿಗದಿ ಕುರಿತು ತೀರ್ಮಾನಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
2021ರಿಂದಲೂ ಜಿಪಂ ಹಾಗೂ ತಾಪಂ ಕ್ಷೇತ್ರಗಳಿಗೆ ಚುನಾವಣೆ ನಡೆದಿಲ್ಲ. ರಾಜ್ಯದ 31 ಜಿಲ್ಲೆಗಳ 1,130 ಜಿಪಂ ಹಾಗೂ 239 ತಾ ಲೂಕುಗಳ 3,671 ತಾಪಂ ಕ್ಷೇತ್ರಗಳಿಗೆ ಚುನಾವಣೆ ನಡೆಯಬೇಕಿದೆ. ಈ ಬಗ್ಗೆ ನ್ಯಾಯಾಲಯದಿಂದಲೂ ತೀವ್ರ ಒತ್ತಡ ಇದೆ. ಹೀಗಾಗಿ ತ್ವರಿತವಾಗಿ ಚುನಾವಣೆಗೆ ಸಿದ್ಧತೆ ನಡೆಸಬೇಕು ಎಂದು ತಿಳಿಸಿದ್ದಾರೆ.