ಬೆಂಗಳೂರು : ಬೆಂಗಳೂರಿನ ಬಾಣಸವಾಡಿಯಲ್ಲಿ ಶಾಲಾ ಬಸ್ ವೊಂದು ಹೊತ್ತಿ ಉರಿದಿದ್ದು, ಬಸ್ ನೊಳಗೆ ಸುಟ್ಟು ಕರಕಲಾದ ವ್ಯಕ್ತಿಯ ಶವ ಪತ್ತೆಯಾಗಿದೆ.
ಬೆಂಗಳೂರಿನ ಬಾಣಸವಾಡಿಯಲ್ಲಿ ಕಳೆದ 4 ತಿಂಗಳಿಂದ ಶಾಲಾ ಬಸ್ ನಿಲ್ಲಿಸಲಾಗಿತ್ತು. ಪಡ್ಡೆ ಹುಡುಗರ ಅಡ್ಡೆಯಾಗಿತ್ತು. ನಿನ್ನೆ ತಡರಾತ್ರಿ ಹೊತ್ತಿ ಬಸ್ ಹೊತ್ತಿ ಉರಿದಿದ್ದು, ಬಸ್ ನೊಳಗೆ ಎಣ್ಣೆ ಹೊಡೆದು, ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಬಸ್ ಗೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.
ಬಾಣಸವಾಡಿಯ ಅಗ್ನಿಶಾಮಕ ಕಚೇರಿ ಬಳಿ ಘಟನೆ ನಡೆದಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.