ಬೆಂಗಳೂರು : ರಾಜ್ಯದಲ್ಲಿ ಆನ್ಲೈನ್ ಗೇಮಿಂಗ್ ಹಾವಳಿ ತಡೆಗೆ ಡಿಜಿಪಿ ಪ್ರಣಬ್ ಮೋಹಂತಿ ನೇತೃತ್ವದಲ್ಲಿ ರಚಿಸಲಾಗಿರುವ ಸಮಿತಿ ಸೆಪ್ಟೆಂಬರ್ನಲ್ಲಿ ವರದಿ ನೀಡಲಿದ್ದು, ಸೆಪ್ಟೆಂಬರ್ ನಲ್ಲೇ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಪ್ರಶೋತ್ತರ ಕಲಾಪ ವೇಳೆ ಬಿಜೆಪಿಯ ಸುರೇಶ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪರಮೆಶ್ವರ್ ಅವರು, ಕಳೆದ 3 ವರ್ಷಗಳಲ್ಲಿ ಆನ್ಲೈನ್ ಬೆಟ್ಟಿಂಗ್ ಪ್ರಕರಣಗಳಿಗೆ ಸಂಬಂಧಿಸಿ 347 ಪ್ರಕರಣ ದಾಖಲಿಸಲಾಗಿದೆ. ಆನ್ ಲೈನ್ ಗೇಮಿಂಗ್ ಸಮಸ್ಯೆ ನಿವಾರಿಸಲು 2020ರಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರಲಾಗಿತ್ತು. ಹೈಕೋರ್ಟ್ನಲ್ಲಿ ತಿದ್ದುಪಡಿ ರದ್ದು ಮಾಡಲಾಗಿತ್ತು. ಈ ಕುರಿತು ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲಾಗಿದೆ ಎಂದರು.
ರಾಜ್ಯದಲ್ಲಿ ಆನ್ಲೈನ್ ಗೇಮಿಂಗ್ ಹಾವಳಿ ತಡೆಗೆ ಡಿಜಿಪಿ ಪ್ರಣಬ್ ಮೋಹಂತಿ ನೇತೃತ್ವದಲ್ಲಿ ರಚಿಸಲಾಗಿರುವ ಸಮಿತಿ ಸೆಪ್ಟೆಂಬರ್ನಲ್ಲಿ ವರದಿ ನೀಡಲಿದೆ. ಅದರ ಆಧಾರದಲ್ಲಿ ನಿಯಮ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.