ಬಾಗಲಕೋಟೆ : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಬಾಗಲಕೋಟೆಯಲ್ಲಿ ಕರ್ತವ್ಯನಿರತ ಎಎಸ್ ಐವೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಹೃದಯಾಘಾತದಿಂದ ಎಎಸ್ ಐ ಮಹಾಂತಯ್ಯ ಮಠ (52) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಹಾಂತಯ್ಯ ಮಠ ಅವರು ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಎಎಸ್ ಐ ಆಗಿದ್ದರು.
ಮಹಾಂತಯ್ಯ ಮಠ ಅವರಿಗೆ ನಿನ್ನೆ ಮಧ್ಯಾಹ್ನ 3 ಗಂಟೆಗೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆಯೇ ಮಹಾಂತಯ್ಯ ಸಾವನ್ನಪ್ಪಿದ್ದಾರೆ. ಮೃತ ಮಹಾಂತಯ್ಯ ವಿಜಯಪುರ ಜಿಲ್ಲೆಯ ಜಂಬಗಿ ಗ್ರಾಮದ ನಿವಾಸಿಯಾಗಿದ್ದರು. ಇಂದು ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.