ಬೆಂಗಳೂರು: ರಾಜ್ಯದಲ್ಲಿ ಮಾಹಿತಿ ಹಕ್ಕು ಕಾಯ್ದೆಯನ್ನು ದುರುಪಯೋಗ ಪಡಿಸಿಕೊಂಡವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಪ್ರಶ್ನೋತ್ತರದ ಅವಧಿಯಲ್ಲಿ ಕಾಂಗ್ರೆಸ್ಸಿನ ಶಾಸಕ ಬೈಲಹೊಂಗಲದ ಕೌಜಲಗಿ ಮಹಾಂತೇಶ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು.ಮಾಹಿತಿ ಹಕ್ಕು ಕಾಯ್ದೆ ದುರುಪಯೋಗ ವಾಗುತ್ತಿರುವುದನ್ನು ಒಪ್ಪಬಹುದಾದರು, ದೇಶದ ಆಡಳಿತ ಕ್ಷೇತ್ರದಲ್ಲಿ ಕ್ರಾಂತಿಕಾರಕ ಹಾಗೂ ಪಾರದರ್ಶಕತೆಗೆ ಕಾಯ್ದೆ ಅನುಕೂಲವಾಗಿದೆ. ದುರುಪಯೋಗವನ್ನು ತಡೆಯಲು ನಿಯಮಗಳನ್ನು ರೂಪಿಸಲು ರಾಜ್ಯ ಸರ್ಕಾರಕ್ಕೆ ಅವಕಾಶಗಳಿವೆ. ನಿರ್ಧಿಷ್ಟ ಪ್ರಕರಣಗಳನ್ನು ಉಲ್ಲೇಖಿಸಿ, ಶಾಸಕರು ಮಾಹಿತಿ ನೀಡಿದರೆ, ಈವರೆಗೂ ಯಾವ ಅಧಿಕಾರಿಯು ಮಾಹಿತಿ ಹಕ್ಕು ದುರುಪಯೋಗದ ಬಗ್ಗೆ ದೂರು ನೀಡಿಲ್ಲ. ಆದರೂ ಸರ್ಕಾರ ಪರಿಶೀಲನೆ ನಡೆಸಿ 26 ಮಂದಿಯನ್ನು ಕಪ್ಪು ಪಟ್ಟಿಗೆ ಸೇರಿಸಿದೆ ಎಂದು ಹೇಳಿದ್ದಾರೆ.
ಲೋಕಾಯುಕ್ತರ ದಾಳಿಯ ವೇಳೆ ಸಿಕ್ಕಿಬಿದ್ದಿರುವ ಮಾಹಿತಿ ಆಯುಕ್ತ ರವೀಂದ್ರ ಗುರುನಾಥ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ. ಮಾಹಿತಿ ನೀಡುವ ದರಗಳನ್ನು ಪರಿಷ್ಕರಣೆ ಮಾಡಲು ಪರಿಶೀಲಿಸುವುದಾಗಿ ಭರವಸೆ ನೀಡಿದರು.
ಮಾಹಿತಿ ಹಕ್ಕು ದುರುಪಯೋಗ ಪಡಿಸಿಕೊಂಡವರ ವಿರುದ್ಧ ಕ್ರಮ
– @HKPatilINC, ಕಾನೂನು ಸಚಿವರು pic.twitter.com/Cs9CUr7Fkm
— DIPR Karnataka (@KarnatakaVarthe) August 12, 2025