ಉಡುಪಿ : ಉಡುಪಿಯಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ ಮಾಡಲಾಗಿದೆ.
ಉಡುಪಿ ನಗರದ ಪುತ್ತೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವಿನಯ್ ದೇವಾಡಿಗ (35) ಕೊಲೆ ಮಾಡಲಾಗಿದೆ. ನಿನ್ನೆ ರಾತ್ರಿ 11 ಗಂಟೆಗೆ ವಿನಯ್ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮನೆಯಲ್ಲಿ ವಿನಯ್ ಇದ್ದನಾ ಎಂದು ವಿಚಾರಿಸಿದ್ದಾರೆ. ಸ್ನೇಹಿತರು ಇರಬಹುದು ಎಂದು ಕುಟುಂಬಸ್ಥರು ಮನೆಯೊಳಗೆ ಬಿಟ್ಟುಕೊಂಡಿದ್ದಾರೆ. ಪತ್ನಿ, ಮಗುವಿನೊಂದಿಗೆ ಮಲಗಿದ್ದ ವಿನಯ್ ಕೋಣೆ ಹೋಗಿ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ತಡೆಯಲು ಹೋಗಿದ್ದ ವಿನಯ್ ಪತ್ನಿ ಕೈಗೆ ಗಂಭೀರ ಗಾಯವಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.