ಹಾವೇರಿ : ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ವರದಾ ನದಿಯ ಬ್ರಿಡ್ಜ್ ಕಂ ಬ್ಯಾರೇಜ್ಗೆ ಬಿದ್ದ ಘಟನೆ ಹಾವೇರಿ ತಾಲೂಕಿನ ಮರಡೂರು ಗ್ರಾಮದಲ್ಲಿ ನಡೆದಿದೆ. ಟ್ರ್ಯಾಕ್ಟರ್ನಲ್ಲಿ ಮೂವರಿದ್ದು, ಅವರನ್ನು ಸ್ಥಳೀಯರು ಸೇರಿದಂತೆ ಅಗ್ನಿಶಾಮಕ ದಳದವರು ರಕ್ಷಣೆ ಮಾಡಿದ್ದಾರೆ.
ಗ್ರಾಮದ ಸುರೇಶ ದೊಡ್ಡಗೌಡರ ಎಂಬುವರಿಗೆ ಸೇರಿದ ಟ್ರ್ಯಾಕ್ಟರ್ ಆಗಿದ್ದು, ನದಿಗೆ ಬಿದ್ದಿದೆ. ಮೆಣಸಿನಕಾಯಿ ಚೀಲವನ್ನು ತೆಗೆದುಕೊಂಡು ಮಾರುಕಟ್ಟೆಗೆ ಹೋಗುತ್ತಿದ್ದ ವೇಳೆ ಈ ಅವಗಡ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಘಟನೆಯಿಂದ ಆಕ್ರೋಶಗೊಂಡಿರುವ ಗ್ರಾಮಸ್ಥರು ಸಣ್ಣನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.