ಬೆಂಗಳೂರು : ಉಪಮುಖ್ಯಮಂತ್ರಿಗಳು ಮತ್ತು ಬೆಂಗಳೂರು ಉಸ್ತುವಾರಿ ಸಚಿವರಾದ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಾಗರಿಕರಿಗೆ ಅನುಕೂಲ ಕಲ್ಪಿಸುವ ದೂರದೃಷ್ಟಿಯಿಂದ ಆಧಾರ್ ಆಧಾರಿತ ಸ್ವಯಂಚಾಲಿತ ಆಸ್ತಿ ವರ್ಗಾವಣೆ ಪ್ರಾರಂಭಿಸಲಾಗಿದೆ.
ನಾಗರಿಕರು ತಮ್ಮ ಆಸ್ತಿಯ ಬಾಕಿ ಇರುವ ಖಾತೆ ವರ್ಗಾವಣೆಗಳನ್ನು ಆನ್‌ಲೈನ್ ಮೂಲಕ ಈ ಕೆಳಗಿನಂತೆ ಸ್ವಯಂಚಾಲಿತ ಆಸ್ತಿ ತಿದ್ದುಪಡಿಗಳನ್ನು ಪಡೆಯಬಹುದು –
1. ಪಾಲಿಕೆ ಜಾಲತಾಣ https://bbmpeaasthi.karnataka.gov.in ಕ್ಕೆ ಭೇಟಿ ನೀಡಿ.
2. “ಪ್ರಮುಖ ಸೂಚನೆಗಳು” ಅಡಿಯಲ್ಲಿ “ekhata Automatic Mutations – Get Your Mutation” ಲಿಂಕ್ ಅನ್ನು ಕ್ಲಿಕ್ ಮಾಡಿ.
3. ಇ.ಪಿ.ಐ.ಡಿ ಸಂಖ್ಯೆಯ ಮೂಲಕ ಬಾಕಿ ಇರುವ ನಿಮ್ಮ ಇ-ಖಾತಾ ಮ್ಯುಟೇಷನ್ ನ್ನು ಹುಡುಕಿ.
4. ಮಾರಾಟಗಾರರ/ನೀಡುವವರ ಮತ್ತು ಖರೀದಿದಾರರ/ಸ್ವೀಕರಿಸುವವರ ಆಧಾರ್ ಇ-ಕೆವೈಸಿ ದೃಢೀಕರಣವನ್ನು ಮಾಡಿ.
5. ಮಾರಾಟಗಾರರ/ನೀಡುವವರ ಆಧಾರ್ ಮತ್ತು ಇ-ಖಾತೆ ಹೊಂದಿರುವ ಮಾಲೀಕರ ಆಧಾರ್‌ನೊಂದಿಗೆ ಹೆಸರಿನೊಂದಿಗೆ ಹೊಂದಾಣಿಕೆಯಾದರೆ, 7 ದಿನಗಳ ಆಕ್ಷೇಪಣಾ ಅವಧಿಯ ನಂತರ ವಿವಾದರಹಿತ ಮ್ಯುಟೇಷನ್ ಸ್ವಯಂಚಾಲಿತವಾಗಿ ಅನುಮೋದನೆಗೊಳ್ಳುತ್ತದೆ.
6. ಸೂಚನೆ: ಯಾವುದೇ ವಿವಾದಿತ ಪ್ರಕರಣವನ್ನು ಸಂಬಂಧಪಟ್ಟ ಬಿಬಿಎಂಪಿ ಅಧಿಕಾರಿಯಿಂದ ವಿಚಾರಣೆ ನಡೆಸಿ ಇತ್ಯರ್ಥಪಡಿಸಲಾಗುವುದು.