ಬೆಂಗಳೂರು : ಇಂದು ನಡೆದ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಕರ್ನಾಟಕ ನೋಂದಣಿ ತಿದ್ದುಪಡಿ ವಿಧೇಯಕದ ಅನುಮೋದನೆಗೆ ಬಹುಮತದಿಂದ ಸಮ್ಮತಿ ಸಿಕ್ಕಿದೆ.
ಈ ಕುರಿತು ಸದನದಲ್ಲಿ ಮಾಹಿತಿ ನೀಡಿರುವ ಸಚಿವ ಕೃಷ್ಣ ಬೈರೇಗೌಡ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲಿಂದ ಆಸ್ತಿ ನೋಂದಣಿ ಕ್ಷೇತ್ರದಲ್ಲಿ ಹಲವು ಮಾರ್ಪಾಡುಗಳನ್ನು ಜಾರಿಗೊಳಿಸಿವೆ. ಅಧಿಕಾರಿಗಳ ಹಸ್ತಕ್ಷೇಪವನ್ನು ಕಡಿಮೆಗೊಳಿಸಿ ಕೆಲಸವು ಸ್ವಯಂಚಾಲಿತವಾಗಿ ನಡೆಯುವುದು ಮಾಡುವುದು ನಮ್ಮ ಉದ್ದೇಶವಾಗಿದೆ. ಇದಕ್ಕೆ ಸೂಕ್ತ ಸಾಧನಗಳನ್ನು ಅಳವಡಿಸಲಾಗಿದೆ ಎಂದು ಹೇಳಿದ್ದಾರೆ.