ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನಟ ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಇಂತಹ ಜಾಮೀನು ಕುರಿತಂತೆ ನಾಳೆ ಸುಪ್ರೀಂ ಕೋರ್ಟ್ ನಾಳೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಹೀಗಾಗಿ ನಾಳೆ ನಟ ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.
ರೇಣುಕಾಸ್ವಾಮಿ ಮರ್ಡರ್ ಕೇಸಲ್ಲಿ ನಟ ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದಂತ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿತ್ತು.
ಈಗಾಗಲೇ ವಾದ, ಪ್ರತಿ ವಾದವನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠವು ಆಲಿಸಿತ್ತು. ಆದರೇ ವಿಚಾರಣಾ ಪಟ್ಟಿಯಲ್ಲಿ ದರ್ಶನ್ ಕೇಸ್ ಅಪ್ ಡೇಟ್ ಆಗಿರಲಿಲ್ಲ. ಹೀಗಾಗಿ ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ಭವಿಷ್ಯ ನಾಳೆ ಪ್ರಕಟಿಸುವ ಸಾಧ್ಯತೆ ಇದೆ.
ಹೊಸ ವಿದ್ಯುತ್ ಗ್ರಾಹಕರಿಗೆ ‘ಸ್ಮಾರ್ಟ್ ಮೀಟರ್’ ಅಳವಡಿಕೆ ಕಡ್ಡಾಯ: ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ರೈತರಿಗೆ ಗುಡ್ ನ್ಯೂಸ್: ಡಿಸೆಂಬರ್ ಒಳಗಾಗಿ 2 ಲಕ್ಷ ಮಂಜೂರಿದಾರರಿಗೆ ಪೋಡಿ