ಮಂಡ್ಯ: ಜಿಲ್ಲೆಯ ಮುರುಕನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಒಬ್ಬರು 20,000 ಲಂಚದ ಹಣ ಸ್ವೀಕರಿಸುತ್ತಿದ್ದಂತ ವೇಳೆಯಲ್ಲೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವಂತ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲ್ಲೂಕಿನ ಮುರುಕನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಒ ಸೈಯದ್ ಮುಜಾಕೀರ್ ಎಂಬುವರು ಇ-ಸ್ವತ್ತು ಮಾಡಿಕೊಡಲು ವ್ಯಕ್ತಿಯೊಬ್ಬರಿಗೆ 50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಈ ಹಿನ್ನಲೆಯಲ್ಲಿ ಮುರುಕನಹಳ್ಳಿ ಪಿಡಿಒ ಸೈಯದ್ ಮುಜಾಕೀರ್ ವಿರುದ್ಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು 50,000 ಲಂಚದ ಹಣದಲ್ಲಿ 20,000 ಮುಂಗಡವಾಗಿ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ರೆಡ್ ಹ್ಯಾಂಡ್ ಹಿಡಿದಿದ್ದಾರೆ.
ಲೋಕಾಯುಕ್ತ ಎಸ್ಪಿ ಬ್ಯಾಟರಾಯನಗೌಡ ನೇತೃತ್ವದಲ್ಲಿ ಈ ದಾಳಿಯನ್ನು ನಡೆಸಿ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲ್ಲೂಕಿನ ಮುರುಕನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಒ ಸೈಯದ್ ಮುಜಾಕೀರ್ ಬಲೆಗೆ ಕೆಡವಿದ್ದಾರೆ. ಇದೀಗ ಪಿಡಿಒ ವಶಕ್ಕೆ ಪಡೆದು, ವಿಚಾರಣೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವರದಿ: ಗಿರೀಶ್ ರಾಜ್, ಮಂಡ್ಯ
ಶಿವಮೊಗ್ಗ: ಆಡಂಬರದ ಪೂಜೆಯಿಂದ ಭಗವಂತನ ಸಾಕ್ಷಾತ್ಕಾರವಾಗುವುದಿಲ್ಲ- ಪಂಡಿತ ಅನಂತ ಪದ್ಮನಾಭಾಚಾರ್
ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಕಡ್ಡಾಯ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್