ಬೆಂಗಳೂರು: ರಾಜ್ಯದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ದುರುಪಯೋಗದ ವಿರುದ್ದ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿದೆ. ಮಾಹಿತಿ ಹಕ್ಕು ದುರುಪಯೋಗ ಪಡಿಸಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕಾನೂನು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ.
ಮಾಹಿತಿ ಹಕ್ಕು ಕಾಯ್ದೆ ದುರುಪಯೋಗ ತಡೆಯಲು ನಿಯಮಗಳನ್ನು ರೂಪಿಸಲು ರಾಜ್ಯ ಸರ್ಕಾರಕ್ಕೆ ಅವಕಾಶಗಳಿವೆ. ಮಾಹಿತಿ ಹಕ್ಕು ದುರುಪಯೋಗಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಈವರೆಗೆ 26 ಮಂದಿಯನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ ಎಂಬುದಾಗಿ ಎಚ್ಚರಿಸಿದ್ದಾರೆ.
ಲೋಕಾಯುಕ್ತ ದಾಳಿಯ ವೇಳೆ ಸಿಕ್ಕಿಬಿದ್ದಿರುವ ಮಾಹಿತಿ ಆಯುಕ್ತ ರವೀಂದ್ರ ಗುರುನಾಥ್ ಡಾಕಪ್ಪನವರ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ. ಮಾಹಿತಿ ನೀಡುವ ದರಗಳನ್ನು ಪರಿಷ್ಕರಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಕಾನೂನು ಸಚಿವರಾದ ಎಚ್.ಕೆ.ಪಾಟೀಲ್ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ಮಾಹಿತಿ ಹಕ್ಕು ಕಾಯ್ದೆ ದುರುಪಯೋಗ ತಡೆಯಲು ನಿಯಮಗಳನ್ನು ರೂಪಿಸಲು ರಾಜ್ಯ ಸರ್ಕಾರಕ್ಕೆ ಅವಕಾಶಗಳಿವೆ. ಮಾಹಿತಿ ಹಕ್ಕು ದುರುಪಯೋಗಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಈವರೆಗೆ 26 ಮಂದಿಯನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ. ಲೋಕಾಯುಕ್ತ ದಾಳಿಯ ವೇಳೆ ಸಿಕ್ಕಿಬಿದ್ದಿರುವ ಮಾಹಿತಿ ಆಯುಕ್ತ ರವೀಂದ್ರ ಗುರುನಾಥ್ ಡಾಕಪ್ಪನವರ್ ಅವರನ್ನು… pic.twitter.com/l4bf5jq10H
— DIPR Karnataka (@KarnatakaVarthe) August 13, 2025