ಬೆಂಗಳೂರು: ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದ ಶಿಫಾರಸ್ಸಿನಂತೆ ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ರಾಜ್ಯದ ಎಲ್ಲಾ ಕ್ಷೇತ್ರಗಳ ಸೀಮಾ ಗಡಿ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಸದಸ್ಯರ ಸಂಖ್ಯೆ ನಿಗದಿಪಡಿಸುವ ಸಂಬಂಧ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮಕ್ಕೆ ತಿದ್ದುಪಡಿ ತರಲಾಗಿದೆ. ಜೊತೆಗೆ ಕ್ಷೇತ್ರಗಳ ಸೀಮಾ ಗಡಿಯನ್ನು ಗುರುತಿಸಿ ಅಧಿಸೂಚಿಸಲಾಗಿದೆ ಎಂದರು.
ಕ್ಷೇತ್ರಗಳ ಮೀಸಲು ನಿಗದಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಅದು ಪೂರ್ಣಗೊಂಡ ನಂತರ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು. ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದ ಶಿಫಾರಸ್ಸಿನಂತೆ ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ರಾಜ್ಯದ ಎಲ್ಲಾ ಕ್ಷೇತ್ರಗಳ ಸೀಮಾ ಗಡಿ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಸದಸ್ಯರ ಸಂಖ್ಯೆ ನಿಗದಿಪಡಿಸುವ ಸಂಬಂಧ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು… pic.twitter.com/uvNx4EEXpU
— DIPR Karnataka (@KarnatakaVarthe) August 14, 2025