ಬೆಂಗಳೂರು: ರಾಜ್ಯದಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯ ಸುರಿದರೆ ಕ್ರಮಿನಲ್ ಮೊಕದ್ದಮ್ಮೆ ದಾಖಲಿಸಲು ಕ್ರಮ ಕೈಗೊಳ್ಳುವುದಾಗಿ ಪೌರಾಡಳಿತ ಸಚಿವ ರಹೀಂ ಖಾನ್ ಎಚ್ಚರಿಸಿದ್ದಾರೆ.
ನಿರಂತರವಾಗಿ ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಹಾಗಿದ್ದೂ ಅನಧಿಕೃತವಾಗಿ ಹೆಚ್ಚು ತ್ಯಾಜ್ಯ ಸುರಿಯುತ್ತಿರುವ ಸ್ಥಳಗಳನ್ನು ಗುರುತಿಸಿ, ಅಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಜೊತೆಗೆ ದಂಡ ಸಹ ವಿಧಿಸಲಾಗುತ್ತಿದ್ದು, ಮುಂದುವರೆದು ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಪೌರಾಡಳಿತ ಸಚಿವರಾದ ರಹೀಂ ಖಾನ್ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ನಿರಂತರವಾಗಿ ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಹಾಗಿದ್ದೂ ಅನಧಿಕೃತವಾಗಿ ಹೆಚ್ಚು ತ್ಯಾಜ್ಯ ಸುರಿಯುತ್ತಿರುವ ಸ್ಥಳಗಳನ್ನು ಗುರುತಿಸಿ, ಅಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಜೊತೆಗೆ ದಂಡ ಸಹ ವಿಧಿಸಲಾಗುತ್ತಿದ್ದು, ಮುಂದುವರೆದು ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮ… pic.twitter.com/zogyLF6K5F
— DIPR Karnataka (@KarnatakaVarthe) August 14, 2025
ಶೀಘ್ರದಲ್ಲೇ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿಗಳಿಗೆ ಚುನಾವಣೆ: ಸಚಿವ ಪ್ರಿಯಾಂಕ್ ಖರ್ಗೆ