ಬೆಂಗಳೂರು : ರಾಜ್ಯ ಸರ್ಕಾರವು ಶಾಲಾ ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಷ್ಟ್ರೀಯ ಹಾಗೂ ನಾಡಹಬ್ಬಗಳಂದು ಬಿಸಿಯೂಟ ಒದಗಿಸುವಂತೆ ಆದೇಶಿಸಿದೆ.
ಮಧ್ಯಾಹ್ನ ಉಪಾಹಾರ (ಪಿಎಂ ಪೋಷಣ್) ಯೋಜನೆಗೆ ಒಳಪಟ್ಟಿರುವ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ರಾಷ್ಟ್ರೀಯ ಹಾಗೂ ನಾಡಹಬ್ಬಗಳಂದು ಬಿಸಿಯೂಟ ಒದಗಿಸುವ ಬಗ್ಗೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ವರ್ಷದಂತೆ ಮಧ್ಯಾಹ್ನ ಉಪಾಹಾರ (ಪಿಎಂ ಪೋಷಣ್) ಯೋಜನೆಯ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಪ್ರತಿ ಶೈಕ್ಷಣಿಕ ವರ್ಷದ ಕೆಲಸದ ದಿನಗಳನ್ನು ಲೆಕ್ಕಿಸುವ ಸಂದರ್ಭದಲ್ಲಿ ರಾಷ್ಟ್ರೀಯ ಹಾಗೂ ನಾಡಹಬ್ಬಗಳನ್ನು (ಕನ್ನಡ ರಾಜ್ಯೋತ್ಸವ) ಶಾಲಾ ಕೆಲಸದ ದಿನಗಳೆಂದು ಪರಿಗಣಿಸಲಾಗಿರುತ್ತದೆ. ಪಿ ಎಂ ಪೋಷಣ್ ಯೋಜನೆ ಅಡಿಯಲ್ಲಿ ಬಿಸಿಯೂಟ ಯೋಜನೆಯನ್ನು ಅನುಷ್ಠಾನ ಮಾಡಲು (ಯೋಜನಾ ಅನುಮೋದನಾ ಮಂಡಳಿ) ಪಿಎಬಿ ಯಿಂದ ಅನುಮೋದನೆಯನ್ನು ಪಡೆಯಲಾಗಿರುತ್ತದೆ.
ಆದ್ದರಿಂದ ಎಲ್ಲಾ ರಾಷ್ಟ್ರೀಯ ಹಾಗೂ ನಾಡಹಬ್ಬಗಳಂದು ಮಧ್ಯಾಹ್ನ ಉಪಾಹಾರ (ಪಿಎಂ ಪೋಷಣ್) ಯೋಜನೆಗೆ ಒಳಪಟ್ಟಿರುವ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಬಿಸಿಯೂಟ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಸೂಚಿಸಿದೆ.