ಜಮ್ಮು-ಕಾಶ್ಮೀರ : ಗುರುವಾರ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚೋಸಿತಿ ಗ್ರಾಮದಲ್ಲಿ ಪ್ರಬಲವಾದ ಮೇಘಸ್ಫೋಟ ಸಂಭವಿಸಿದ್ದು, ಹಠಾತ್ ಪ್ರವಾಹ ಉಂಟಾಗಿ ಕನಿಷ್ಠ 46 ಜನರು ಸಾವನ್ನಪ್ಪಿದ್ದಾರೆ.
ಕಿಪ್ತಾರ್ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಭೀಕರ ಮೇಘಸ್ಫೋಟದಿಂದ ಹಠಾತ್ ಪ್ರವಾಹವುಂಟಾಗಿ ಇಬ್ಬರು ಸಿಐಎಸ್ಎಫ್ ಸಿಬ್ಬಂದಿ ಸೇರಿ 46 ಮಂದಿ ಸಾವಿಗೀಡಾಗಿ ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ನೂರಿಪ್ಪತ್ತಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದ್ದರೂ ಸಾವು-ನೋವಿನ ಪ್ರಮಾಣ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಪೊಲೀಸ್, ಸೇನೆ ಹಾಗೂ ಸ್ಥಳೀಯ ಸ್ವಯಂಸೇವಕರನ್ನು ಒಳಗೊಂಡಂತೆ ಹಲವರು ರಕ್ಷಣೆಗೆ ಕೈಜೋಡಿಸಿದ್ದು, ಕಾರ್ಯಾಚರಣೆ ತೀವ್ರಗತಿಯಲ್ಲಿ ನಡೆಯುತ್ತಿದೆ. ಮಚೈಲ್ ಮಾತಾದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ವಾಹನ ತಲುಪಬಹುದಾದ ಕೊನೆಯ ಸ್ಥಳವಾದ ಚೊಸ್ಥಿತಿಯಲ್ಲಿ ಮಧ್ಯಾಹ್ನ 12ರಿಂದ 1 ಗಂಟೆಯ ಅವಧಿಯಲ್ಲಿ ಮೇಘಸ್ಫೋಟ ಸಂಭವಿಸಿದೆ.
ಘಟನಾ ಸ್ಥಳದಲ್ಲಿ ರಕ್ಷಣಾ ತಂಡಗಳು ಬೀಡು ಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇತ್ತೀಚಿನ ಮಾಹಿತಿ ಪ್ರಕಾರ ಇಬ್ಬರು ಯೋಧರ ಮೃತದೇಹವನ್ನು ರಕ್ಷಣಾ ತಂಡ ಹೊರತೆಗೆದಿದೆ. 50 ಜನರನ್ನು ರಕ್ಷಿಸಲಾಗಿದೆ. 200ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದು, ಶೋಧಕಾರ್ಯ ಮುಂದುವರೆದಿದೆ.
ಜಮ್ಮು ಮತ್ತು ಕಾಶ್ಮೀರದ ಅಧಿಕಾರಿಗಳ ಪ್ರಕಾರ, ಆಗಸ್ಟ್ 15ರ ಇಂದು ಸ್ವಾತಂತ್ರ್ಯ ದಿನಾಚರಣೆಯಂದು ಯೋಜಿಸಲಾಗಿದ್ದ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಈ ದುರಂತ ಘಟನೆಯಿಂದಾಗಿ ರದ್ದುಗೊಳಿಸಲಾಗಿದೆ.
Cloudburst hits Chositi, #Kishtwar. Administration swings into action; rescue team heads to site. Union Minister @DrJitendraSingh speaks to DC Pankaj Kumar Sharma & LoP @Sunil_SharmaBJP , says damage assessment, rescue & medical aid underway; all help to be provided.@dckishtwar pic.twitter.com/v7ajZyzWyG
— Akashvani News Jammu (@radionews_jammu) August 14, 2025
#WATCH | J&K | A flash flood has occurred at the Chashoti area in Kishtwar, which is the starting point of the Machail Mata Yatra. Rescue Operations have been started. pic.twitter.com/dQbUBx46A9
— ANI (@ANI) August 14, 2025