ಶಿವಮೊಗ್ಗ: ಎಲ್ಲೆಡೆ ಸಂಭ್ರಮ, ಸಡಗರದಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಇತ್ತ ಜಿಲ್ಲೆಯ ಶಕ್ತಿ ದೇವತೆ ಸಿಗಂದೂರು ಶ್ರೀ ಚೌಡೇಶ್ವರಿಯನ್ನು ಭಾರತ ಮಾತೆಯಂತೆ ಸಿಂಗಾರಗೊಳಿಸಿ, ದೇಶ ಭಕ್ತಿಯನ್ನು ಮೆರೆಯಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂದೂರಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳ, ಸುಂದರವಾಗಿ ಆಚರಿಸಲಾಯಿತು. ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ನಡೆದ ಧ್ವಜಾರೋಹಣವನ್ನು ಧರ್ಮದರ್ಶಿ ಡಾ.ಎಸ್.ರಾಮಪ್ಪ ಅವರು ನೆರವೇರಿಸಿದರು.
ಈ ಬಳಿಕ ಸಿಗಂದೂರು ಚೌಡೇಶ್ವರಿ ದೇವಾಲಯದ ಧರ್ಮದರ್ಶಿ ಡಾ.ಎಸ್ ರಾಮಪ್ಪನವರು ದೇಶದ ಜನತೆಗೆ ಸ್ವಾತಂತ್ರ್ಯೋತ್ಸವದ ಶುಭ ಕೋರಿದರು.
ಈ ಸಂದರ್ಭದಲ್ಲಿ ದೇವಾಲಯದ ಕಾರ್ಯದರ್ಶಿ ಹೆಚ್ ಆರ್ ರವಿಕುಮಾರ್, ವ್ಯವಸ್ಥಾಪಕರಾದ ಪ್ರಕಾಶ್ ಭಂಡಾರಿ, ಕಳಸವಳ್ಳಿ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು