ಬೆಂಗಳೂರು: ನಗರದ ವಿಲ್ಸನ್ ಗಾರ್ಡನ್ ನಲ್ಲಿ ನಿಗೂಢ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಂತ 10 ವರ್ಷದ ಬಾಲಕ ಮುಬಾರಕ್ ಎಂಬಾತ ಸಾವನ್ನಪ್ಪಿದ್ದಾರೆ. 13 ಕ್ಕೂ ಹೆಚ್ಚು ಮನೆಗಳು ಧ್ವಂಸವಾಗಿದ್ದು, ಸದ್ಯ ಘಟನೆಯ ನಂತರದ ವಿಡಿಯೋ ವೈರಲ್ ಆಗಿದೆ.
ಬೆಂಗಳೂರಿನ ವಿಲ್ಸನ್ ಗಾರ್ಡ್ ಬಳಿಯಲ್ಲಿ ನಿಗೂಢ ಸ್ಪೋಟ ಉಂಟಾಗಿದೆ. ಈ ಸ್ಫೋಟದಲ್ಲಿ ಮೂರು ಮನೆಗಳು ಛಿದ್ರ ಛಿದ್ರವಾಗಿದ್ದಾವೆ. ಸುಮಾರು 15 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ 12 ಮಂದಿ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರಿನ ಚಿನ್ನಯ್ಯಪಾಳ್ಯದಲ್ಲಿ ನಡೆದ ನಿಗೂಢ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಸಿಎಂ ಸಿದ್ದರಾಮಯ್ಯ ಪರಿಶೀಲನೆ ನಡೆಸಿದ್ದು, ದುರ್ಘಟನೆಯಲ್ಲಿ ಮೃತಪಟ್ಟ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವಘಡದಲ್ಲಿ ಮೃತಪಟ್ಟ ಬಾಲಕ ಮುಬಾರಕ್ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದು ಘೋಷಿಸಿದ್ದಾರೆ. ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನ ವಿಲ್ಸನ್ ಗಾರ್ಡ್ ಬಳಿಯಲ್ಲಿ ನಿಗೂಢ ಸ್ಪೋಟ ಉಂಟಾಗಿದೆ. ಈ ಸ್ಫೋಟದಲ್ಲಿ ಮೂರು ಮನೆಗಳು ಛಿದ್ರ ಛಿದ್ರವಾಗಿದ್ದಾವೆ. ಸುಮಾರು 15 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ 12 ಮಂದಿ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ವಿಷಯ ತಿಳಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಲ್ಸನ್ ಗಾರ್ಡನ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಥಳದಲ್ಲಿ ಇದ್ದಂತ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
Several injured in a major cylinder blast in Wilson Garden, Bengaluru, on August 15, 2025, which damaged nearby houses.
📸&📹Allen Egenuse pic.twitter.com/ujM7XnkwBS
— Imran khan (@iamIMP_1) August 15, 2025