ಬೆಂಗಳೂರು: ಹಲವು ಎಚ್ಚರಿಕೆಗಳ ನಡುವೆಯೂ ಮುಖ್ಯಮಂತ್ರಿ ಅಧಿಕಾರ ಹಸ್ತಾಂತರದ ಬಗ್ಗೆ ಹೇಳಿಕೆ ಮುಂದುವರೆಸಿರುವ ಶಾಸಕ ಬಸವರಾಜು ವಿ ಶಿವಗಂಗಾ ಅವರಿಗೆ ನೋಟಿಸ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.
ಸಿಎಂ ಅಧಿಕಾರ ಮತ್ತಿತರ ವಿಚಾರಗಳ ಬಗ್ಗೆ ಯಾರೂ ಮಾತಾಡಬಾರದು. ಶಾಸಕರು ಪಕ್ಷದ ಶಿಸ್ತು ಪಾಲಿಸಬೇಕು. ಚೌಕಟ್ಟು ಮೀರಬಾರದು. ಅನಗತ್ಯ ಹೇಳಿಕೆಗಳನ್ನು ಕೊಟ್ಟು ಗೊಂದಲ ಮೂಡಿಸಬಾರದು ಎಂದು ಈ ಹಿಂದೆಯೇ ಕಟ್ಟುನಿಟ್ಟಾಗಿ ಸೂಚನೆ ನೀಡಲಾಗಿದೆ. ಆದರೂ ಶಿವಗಂಗಾ ಅವರು ಮತ್ತೇ ಹೇಳಿಕೆ ನೀಡಿರುವುದು ಪಕ್ಷದ ಶಿಸ್ತಿನ ಉಲ್ಲಂಘನೆ ಆಗುತ್ತದೆ. ಹೀಗಾಗಿ ಅವರಿಗೆ ನೋಟಿಸ್ ನೀಡಲಾಗುವುದು ಎಂದು ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಚನ್ನಗಿರಿ ವಿಧಾನಸಭೆ ಕ್ಷೇತ್ರದ ಶಾಸಕ ಬಸವರಾಜು ವಿ ಶಿವಗಂಗಾ ಅವರು ದಾವಣಗೆರೆಯಲ್ಲಿ ಇಂದು ಸಿಎಂ ಅಧಿಕಾರ ಕುರಿತು ಹೇಳಿಕೆ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು.
ಬೋಳು ತಲೆ, ಸುಕ್ಕು ಗಟ್ಟಿದ ಮುಖದಲ್ಲಿ ದರ್ಶನ್, ನಗುವಿನಲ್ಲಿ ಪವಿತ್ರಾ: ‘ಡಿ ಬಾಸ್’ ಗ್ಯಾಂಗ್ ಹೊಸ ಪೋಟೋ ರಿಲೀಸ್
ದೇವಸ್ಥಾನಗಳ ಶ್ರೇಯೋಭಿವೃದ್ದಿಗೆ ಅಗತ್ಯ ಸಹಕಾರ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು