ಹಾಸನ: ಹಾಸ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹಳಿ ಮೇಲೆ ಮಣ್ಣು ಕುಸಿದ ಪರಿಣಾಮ ಬೆಂಗಳೂರು-ಮಂಗಳೂರು ರೈಲ್ವೆ ಮಾರ್ಗ ತಾತ್ಕಾಲಿಕ ಬಂದ್ ಆಗಿದೆ.
ಹಾಸನ ಜಿಲ್ಲೆಯ ಭಾರೀ ಮಳೆಯಿಂದಾಗಿ 7 ಕಿ.ಮೀ ವ್ಯಾಪ್ತಿಯಲ್ಲಿ 15 ಕಡೆಗಳಲ್ಲಿ ಭೂಕುಸಿತ ಉಂಟಾಗಿದೆ. ಸಕಲೇಶಪುರ ತಾಲೂಕಿನ ಎಡಕುಮಾರಿ ಸಮೀಪ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿದ್ದು, ಬೆಂಗಳೂರು-ಮಂಗಳೂರು ರೈಲ್ವೆ ಮಾರ್ಗ ತಾತ್ಕಾಲಿಕ ಬಂದ್ ಆಗಿದೆ.
ಭಾರೀ ಮಳೆಯಿಂದಾಗಿ ಸಕಲೇಶಪುರ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂಕುಸಿತ ಸಂಭವಿಸಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ.
#WATCH | Sakleshpura, Karnataka: Heavy rain caused a landslide at NH-75, causing traffic obstruction. (16.08) pic.twitter.com/WBeelg8bFe
— ANI (@ANI) August 16, 2025