ಬಳ್ಳಾರಿ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಭೈರಾಪುರ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಮಂಡ್ಯ ಮೂಲದ ಶ್ವೇತಾ (38) ಹಾಗೂ ಕನಕಪುರದ ಬಾಲನಾಯಕ (42) ಸಾವನ್ನಪ್ಪಿದ್ದಾರೆ. ಮಸ್ಕಿಯಿಂದ ಬೆಂಗಳೂರಿಗೆ ಬಸ್ ತೆರಳುತ್ತಿತ್ತು. ಗಾಯಾಳುಗಳನ್ನು ಸಿರುಗುಪ್ಪ, ಬಳ್ಳಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿರಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.