ಬೆಂಗಳೂರು : ರಾಜ್ಯಾದ್ಯಂತ ಮುಜರಾಯಿ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದ್ದು, ಇನ್ಮುಂದೆ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಲೋಟ, ತಟ್ಟೆಯಲ್ಲಿ ಪ್ರಸಾದ ನೀಡುವಂತಿಲ್ಲ ಎಂದು ಆದೇಶಿಸಲಾಗಿದೆ.
ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಇದೇ ಆ. 15ರಿಂದ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಆಗಸ್ಟ್ 15ರಿಂದ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಯಾಗಲಿದ್ದು, ನಿಯಮ ಉಲ್ಲಂಘಿಸಿರುವರ ವಿರುದ್ಧ ದಂಡ ವಿಧಿಸುವಂತೆ ಸಂಬಂಧಪಟ್ಟ ದೇವಾಲಯದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ದೇವಾಲಯ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳು ಬಳಸುತ್ತಿರುವುದು ಕಂಡುಬಂದರೆ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ತಿಳಿಸಲಾಗಿದೆ.