ಚಿತ್ರದುರ್ಗ : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಚಿವ ಮಧುಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 17 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 17 ಸಾವಿರ ಶಿಕ್ಷಕ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈಗಾಗಲೇ ಅನುಮೋದನೆ ನೀಡಿದ್ದು, ಈ ಬಾರಿಯ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಹೆಚ್ಚಿನ ಕಾಲಾವಧಿಯನ್ನು ತೆಗೆದುಕೊಳ್ಳದೆ ಕೇವಲ 3ರಿಂದ 4 ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆ ನಡೆಸಿ, ಶಾಲೆಗಳಿಗೆ ಶಿಕ್ಷಕರನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿನ 16,500 ಸರ್ಕಾರಿ ಶಾಲೆಗಳಿಗೆ ಹೊಸ ಪಾತ್ರೆಗಳನ್ನು ನೀಡಲಾಗುತ್ತದೆ, ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ಕರಡು ವರದಿ ಸಲ್ಲಿಸಲಾಗಿದ್ದು, ಅದರಲ್ಲಿರುವ ನ್ಯೂನತೆಗಳನ್ನು ಪರಿಶೀಲಿಸಲು ಉಪ ಸಮಿತಿ ರಚನೆ ಮಾಡಿ, ನಂತರ ಅಂತಿಮವಾಗಿ ಅನುಷ್ಠಾನ ಮಾಡಲಾಗುವುದು. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.