ನವದೆಹಲಿ: ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಾದ ದ್ವಾರಕಾ ಎಕ್ಸ್‌ಪ್ರೆಸ್‌ವೇಯ ದೆಹಲಿ ವಿಭಾಗ ಮತ್ತು ನಗರ ವಿಸ್ತರಣಾ ರಸ್ತೆ-II ಉದ್ಘಾಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲಿಗರಿಂದ ಭವ್ಯ ಸ್ವಾಗತ ಸಿಕ್ಕಿದೆ.
ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (NCR) ಸುಮಾರು 11 ಸಾವಿರ ಕೋಟಿ ರೂ. ಮೌಲ್ಯದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಲಿದ್ದಾರೆ. ಈ ಯೋಜನೆಗಳಲ್ಲಿ ದೆಹಲಿ ವಿಭಾಗದ ದ್ವಾರಕಾ ಎಕ್ಸ್‌ಪ್ರೆಸ್‌ವೇ ಮತ್ತು ನಗರ ವಿಸ್ತರಣಾ ರಸ್ತೆ -2 (UER-2) ಸೇರಿವೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರವನ್ನು ಸುಗಮಗೊಳಿಸುವುದು, ಪ್ರಯಾಣದ ಸಮಯವನ್ನು ಕಡಿಮೆ ಮಾಡುವುದು ಮತ್ತು ದೆಹಲಿಯ ನಿವಾಸಿಗಳಿಗೆ ಸಂಚಾರ ದಟ್ಟಣೆಯಿಂದ ಪರಿಹಾರ ನೀಡುವುದು ಈ ಯೋಜನೆಗಳ ಉದ್ದೇಶವಾಗಿದೆ. ಉದ್ಘಾಟನೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ದ್ವಾರಕಾ ಎಕ್ಸ್‌ಪ್ರೆಸ್‌ವೇಯ ದೆಹಲಿ ವಿಭಾಗ ಮತ್ತು ನಗರ ವಿಸ್ತರಣಾ ರಸ್ತೆ -2 (UER-2) ನಿರ್ಮಿಸುತ್ತಿರುವ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.
#WATCH | Delhi: Prime Minister Narendra Modi recieves a grand welcome by supporters before the inauguration of two major National Highway projects– the Delhi section of the Dwarka Expressway and the Urban Extension Road-II (UER-II).
(Source: DD News) pic.twitter.com/wrGIVaBbS5
— ANI (@ANI) August 17, 2025