ಬೆಂಗಳೂರು: ಬೆಂಗಳೂರು: ಬೆಂಗಳೂರಿನ ನಗರ್ತಪೇಟೆಯಲ್ಲಿ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಟ್ಟಡ ಮಾಲೀಕರನನ್ನು ಪೊಲೀಸರು ಬಂಧಿಸಿದ್ದಾರೆ.
ಕೆ.ಆರ್ ಪೇಟೆಯಯಲ್ಲಿ ಐವರನ್ನು ಬಲಿ ಪಡೆದಿದ್ದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಾಲಕೃಷ್ಣ ಶೆಟ್ಟಿ ಮತ್ತು ಸಂದೀಪ್ ಶೆಟ್ಟಿ ಎಂದು ಗುರುತಿಸಲಾಗಿದೆ.
ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡ ಮಾಲೀಕರಾದ ಬಾಲಕೃಷ್ಣಯ್ಯ ಶೆಟ್ಟಿ, ಸಂದೀಪ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಕಟ್ಟಡದಲ್ಲಿ ಅಗ್ನಿ ಅವಘಡ ತಪ್ಪಿಸಲು ಸಾಮಾನ್ಯ ಸೇಫ್ಟಿ ಸಹ ಇರಲಿಲ್ಲ. ಈ ಕಾರಣಕ್ಕಾಗಿ ಕಟ್ಟಡದ ಮಾಲೀಕರನ್ನು ಬಂಧಿಸಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ಹಕಾಯ್ ತಿಳಿಸಲಾಗಿದೆ.