ಚನ್ನಗಿರಿ: ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಗೆ ಕಾಂಗ್ರೆಸ್ ಪಕ್ಷದಿಂದ ಶೋಕಾಸ್ ನೋಟಿಸ್ ನೀಡಲಾಗಿದೆ.
ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿಯಿಂದ ಶೋಕಾಸ್ ನೋಟಿಸ್ ನೀಡಲಾಗಿದೆ. ಸಿಎಂ ಬದಲಾವಣೆ ವಿಚಾರವಾಗಿ ಹೇಳಿಕೆಯನ್ನು ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ನೀಡಿದ್ದರು.
ಶಾಸಕ ಶಿವಗಂಗಾ ಬಸವರಾಜ್ ಹೇಳಿಕೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗರಂ ಆಗಿದ್ದಲ್ಲದೇ ಅವರಿಗೆ ನೋಟಿಸ್ ನೀಡುವುದಾಗಿಯೂ ತಿಳಿಸಿದ್ದರು. ಅದರಂತೆ ಇಂದು ನಿಮ್ಮ ಬಹಿರಂಗ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರವಾಗಿದೆ. ಶೋಕಾಸ್ ನೋಟಿಸ್ ಗೆ 7 ದಿನಗಳೊಳಗೆ ಉತ್ತರ ನೀಡುವಂತೆ ಸೂಚಿಸಲಾಗಿದೆ.
ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿಯ ಸಂಚಾಲಕ ನಿವೇದಿತ್ ಆಳ್ವಾ ಅವರಿಂದ ಶಾಸಕ ಶಿವಗಂಗಾ ಬಸವರಾಜ್ ಗೆ ಶೋಕಾಸ್ ನೋಟಿಸ್ ನೀಡಲಾಗಿದೆ.
ಪರಿಷ್ಕೃತ ಜಿಎಸ್‌ಟಿ ದರಗಳಿಂದ ಯಾವ ವಸ್ತುಗಳು ಅಗ್ಗವಾಗಬಹುದು? ಇಲ್ಲಿದೆ ಡೀಟೆಲ್ಸ್ | GST bonanza