ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೇಳಿಕೆ ನೀಡಿ ಕೆಪಿಸಿಸಿ ಅಧ್ಯಕ್ಷರ ಕೆಂಗಣ್ಣಿಗೆ ಗುರಿಯಾಗಿದ್ದಂತ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಗೆ ಕೆಪಿಸಿಸಿಯಿಂದ ಕಾರಣ ಕೇಳಿ ಶೋಕಾಸ್ ನೋಟಿಸ್ ನೀಡಲಾಗಿದೆ.
ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಸ್ತು ಪಾಲನಾ ಸಮಿತಿಯ ಸಂಚಾಲಕರಾದಂತ ನಿವೇದಿತ್ ಅಳ್ವಾ ಅವರು ಶಾಸಕ ಶಿವಗಂಗಾ ಬಸವರಾಜ್ ಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಅದರಲ್ಲಿ ಬಸವರಾಜು ವಿ. ಶಿವಗಂಗಾ, ಶಾಸಕರು, ಚನ್ನಗಿರಿ ವಿಧಾನ ಸಭೆ, ಆದ ತಾವು ಮಾನ್ಯ ಮುಖ್ಯಮಂತ್ರಿಗಳ ಬದಲಾವಣೆ ವಿಷಯದಲ್ಲಿ ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟು ಮಾಡುವ ರೀತಿಯ ಹೇಳಿಕೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿರುತ್ತದೆ ಎಂದಿದ್ದಾರೆ.
ತಮ್ಮ ಈ ಬಹಿರಂಗ ಹೇಳಿಕೆಗಳು ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದಲ್ಲದೆ, ಪಕ್ಷದ ಶಿಸ್ತು ಉಲ್ಲಂಘನೆ ಆಗಿರುತ್ತದೆ. ತಮ್ಮ ಈ ಅಶಿಸ್ತಿನ ಹೇಳಿಕೆಗಳನ್ನು ಕೆಪಿಸಿಸಿ ಶಿಸ್ತು ಸಮಿತಿಯ ಗಂಭೀರವಾಗಿ ಪರಿಗಣಿಸಿ ಈ ಕಾರಣ ಕೇಳಿ ನೋಟಿಸನ್ನು ನೀಡಲಾಗಿದೆ. ತಾವು ಈ ನೋಟೀಸು ತಲುಪಿದ 7 ದಿನಗಳಲ್ಲಿ ತಮ್ಮ ಹೇಳಿಕೆಗಳ ಬಗ್ಗೆ ಸಮಜಾಯಿಷಿಯನ್ನು ನೀಡಲು ಸೂಚಿಸಲಾಗಿದೆ.
ಧರ್ಮಸ್ಥಳದ ಕುರಿತ ನಿರಂತರ ಅಪಪ್ರಚಾರಕ್ಕೆ ಬಿವೈ ವಿಜಯೇಂದ್ರ ತೀವ್ರ ಆಕ್ಷೇಪ: ಸಿಎಂ ಜನತೆ ಕ್ಷಮೆಗೆ ಒತ್ತಾಯ
ಪರಿಷ್ಕೃತ ಜಿಎಸ್‌ಟಿ ದರಗಳಿಂದ ಯಾವ ವಸ್ತುಗಳು ಅಗ್ಗವಾಗಬಹುದು? ಇಲ್ಲಿದೆ ಡೀಟೆಲ್ಸ್ | GST bonanza