ಬೆಂಗಳೂರು : ಆರ್‌ಎಸ್‌ಎಸ್ ನವರು ದೇಶದಲ್ಲಿ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ನಾನು ಆರ್‌ಎಸ್‌ಎಸ್ ಅನ್ನು ತಾಲಿಬಾನ್‌ಗೆ ಹೋಲಿಸುತ್ತೇನೆ. ಅವರು ಭಾರತೀಯ ತಾಲಿಬಾನ್‌ಗಳು ಮತ್ತು ಪ್ರಧಾನಿ ಅವರನ್ನು ಕೆಂಪು ಕೋಟೆಯಿಂದ ಶ್ಲಾಘಿಸುತ್ತಿದ್ದಾರೆ ಎಂದು ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್‌ಎಸ್‌ಎಸ್ ಹೊಗಳಿದ್ದಕ್ಕಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ನೊಂದಣಿ ಆಗಿರುವ ಸಂಘಟನೆ ಅಲ್ಲ. ಇಡೀ ದೇಶದಲ್ಲಿ ದೊಡ್ಡ ಸಂಘಟನೆ ಎಂದು ಬಿಂಬಿಸಿಕೊಳ್ಳುತ್ತಾರೆ. ಆದ್ರೆ, ಅವರಿಗೆ ಹಣ ಎಲ್ಲಿಂದ ಬರುತ್ತೆ. ಇತಿಹಾಸವನ್ನು ತಿರುಚುವುದರಲ್ಲಿ ಆರ್ ಎಸ್ಎಸ್ ಹಾಗೂ ಬಿಜೆಪಿಯವರು ಪ್ರವೀಣರು. ಕಳೆದ 52 ವರ್ಷಗಳಿಂದ ಆರ್ ಎಸ್ಎಸ್ ಕಚೇರಿ ಮೇಲೆ ತ್ರಿವರ್ಣಧ್ವಜ ಹಾರಿಸಿಲ್ಲ ಏಕೆ? ಎಂದು ಪ್ರಶ್ನಿಸಿದರು.
ದೇಶಕ್ಕಾಗಿ ಪ್ರಾಣ ತೆತ್ತವರ ಹೆಸರನ್ನು ಹೇಳುವುದನ್ನು ಬಿಟ್ಟು ಓಲೈಕೆಗಾಗಿ ಮೋದಿಯವರು ಆರ್ ಎಸ್ಎಸ್ ಅನ್ನು ಹೊಗಳಿದ್ದು ಸರಿಯಲ್ಲ.ವಿಭಜನೆಗಾಗಿ ಬಂಗಾಳದಲ್ಲಿ ಮೊದಲ ನಿರ್ಣಯವನ್ನು ಮಂಡಿಸಿದವರು ಫಜ್ಲುಲ್ ಹಕ್ ಮತ್ತು ಶ್ಯಾಮ ಪ್ರಸಾದ್ ಮುಖರ್ಜಿ. ಜಿನ್ನಾ ಮತ್ತು ಸಾವರ್ಕರ್ ಎರಡೂ ಧರ್ಮಗಳಿಗೆ ಪ್ರತ್ಯೇಕ ರಾಜ್ಯ ಬೇಕು ಎಂದು ಅಭಿಪ್ರಾಯಪಟ್ಟರು. ಅವರು ಅದಕ್ಕೆ ಕಾಂಗ್ರೆಸ್ ಅನ್ನು ದೂಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.