ಬೆಂಗಳೂರು: ಸ್ವಾತಂತ್ರ್ಯ ದಿನದ ದೀರ್ಘ ವಾರಾಂತ್ಯದ ನಂತರ ಪ್ರಯಾಣಿಕರ ಚಲನವಲನವು ಹೆಚ್ಚಿನ ಪ್ರಮಾಣದಲ್ಲಿ ಇರುವ ನಿರೀಕ್ಷೆಯಿದ್ದು, ನಮ್ಮ ಮೆಟ್ರೋ ಹಳದಿ ಮಾರ್ಗದ ಸೇವೆಗಳನ್ನು ದಿನಾಂಕ 18ನೇ 2025ರ ಸೋಮವಾರ ಬೆಳಿಗ್ಗೆ 5:00 ಗಂಟೆಗೆ ಆರಂಭವಾಗಲಿದೆ. ಮೊದಲ ಮೆಟ್ರೋ ರೈಲು ಸೇವೆ ಆರ್.ವಿ ರಸ್ತೆಯಿಂದ ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ನಿಲ್ದಾಣಗಳಿಂದ ಹೊರಡಲಿವೆ. ಈ ವಿಶೇಷ ವ್ಯವಸ್ಥೆ ಕೇವಲ 18ನೇ ಆಗಸ್ಟ್ 2025ರ ಸೋಮವಾರಕ್ಕೆ ಮಾತ್ರ ಅನ್ವಯವಾಗುತ್ತದೆ. ಮುಂದಿನ ದಿನವಾದ ಮಂಗಳವಾರದಿಂದ (ಆಗಸ್ಟ್ 19) ಮೆಟ್ರೋ ಸೇವೆಗಳು ಎಂದಿನಂತೆ ಬೆಳಿಗ್ಗೆ 6:30 ರಿಂದ ಪ್ರಾರಂಭವಾಗಲಿವೆ.
ಪ್ರಯಾಣಿಕರು ತಮ್ಮ ಪ್ರಯಾಣವನ್ನು ಸುಗಮಗೊಳಿಸಲು ಈ ಬೆಳಗಿನ ಸೇವೆಯ ಲಾಭವನ್ನು ಪಡೆಯುವಂತೆ ಪ್ರೋತ್ಸಾಹಿಸಲಾಗುತ್ತಿದೆ.
ಈ ಹಿಂದೆ ಘೋಷಿಸಿದಂತೆ, ನೇರಳೆ ಮಾರ್ಗ ಮತ್ತು ಹಸಿರು ಮಾರ್ಗದ ಮೆಟ್ರೋ ಸೇವೆಗಳು ಸೋಮವಾರದಂದು ಸಾಮಾನ್ಯವಾಗಿ ಬೆಳಿಗ್ಗೆ 4:15 ರಿಂದಲೇ ಕಾರ್ಯನಿರ್ವಹಿಸುತ್ತವೆ.
ಬೆಂಗಳೂರಿನ ಅವೈಜ್ಞಾನಿಕ, ದುರ್ಬಲ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್: ಕ್ರಿಮಿನಲ್ ಕೇಸ್ ಫಿಕ್ಸ್
ಪರಿಷ್ಕೃತ ಜಿಎಸ್‌ಟಿ ದರಗಳಿಂದ ಯಾವ ವಸ್ತುಗಳು ಅಗ್ಗವಾಗಬಹುದು? ಇಲ್ಲಿದೆ ಡೀಟೆಲ್ಸ್ | GST bonanza