ಬೆಂಗಳೂರು: ರಾಜ್ಯಾಧ್ಯಂತ ದೇಗುಲಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಲಾಗಿದೆ. ಪ್ಲಾಸ್ಟಿಕ್ ತಟ್ಟೆ ಮತ್ತು ಬೌಲ್ ನಲ್ಲಿ ಪ್ರಸಾದ ನೀಡುವಂತಿಲ್ಲ. ಒಂದು ವೇಳೆ ನೀಡಿದರೇ ಅಂತವರ ವಿರುದ್ಧ ರಾಜ್ಯ ಸರ್ಕಾರ ಕಾನೂನು ಕ್ರಮವನ್ನು ಕೈಗೊಳ್ಳಲಿದೆ. ಈ ಆದೇಶವು 36,000 ಮುಜರಾಯಿ ಇಲಾಖೆ ದೇಗುಲಕ್ಕೆ ಅನ್ವಯ ಆಗಲಿದೆ.
ಇಂದು ಬೆಂಗಳೂರಿನ ಗವಿಗಂಗಾಧರೇಶ್ವರ ದೇಗುಲದಲ್ಲಿ ಅಧಿಕೃತವಾಗಿ ಪ್ಲಾಸ್ಟಿಕ್ ಮುಕ್ತ ದೇವಾಲಯ ಅಭಿಯಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು. ಆಗಸ್ಟ್.15ರಿಂದಲೇ ಜಾರಿಗೆ ಬರುವಂತೆ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿತ್ತು.
ಸರ್ಕಾರದ ನಿಯಮದಂತೆ ಪ್ಲಾಸ್ಟಿಕ್ ತಟ್ಟೆ ಮತ್ತು ಬೌಲ್ ಗಳಲ್ಲಿ ಪ್ರಸಾದ ನೀಡುವುದನ್ನು ನಿಷೇಧಿಸಲಾಗಿದೆ. ಈ ನಿಯಮವು ಮುಜರಾಯಿ ಇಲಾಖೆ ವ್ಯಾಪ್ತಿಯ 36,000 ದೇಗುಲಕ್ಕೆ ಅನ್ವಯವಾಗಲಿದೆ. ಪ್ಲಾಸ್ಟಿಕ್ ಲೋಟ ಕೂಡ ಬಳಸದಂತೆ ರಾಜ್ಯ ಸರ್ಕಾರ ಖಡಕ್ ಆದೇಶ ಮಾಡಿದೆ.
KRS ಡ್ಯಾಂ ನಿಂದ ಮತ್ತೆ ಕಾವೇರಿ ನದಿಗೆ 50,000 ಕ್ಯೂಸೆಕ್ಸ್ ನೀರು ಬಿಡುಗಡೆ
ಪರಿಷ್ಕೃತ ಜಿಎಸ್‌ಟಿ ದರಗಳಿಂದ ಯಾವ ವಸ್ತುಗಳು ಅಗ್ಗವಾಗಬಹುದು? ಇಲ್ಲಿದೆ ಡೀಟೆಲ್ಸ್ | GST bonanza
ಧರ್ಮಸ್ಥಳದ ಕುರಿತ ನಿರಂತರ ಅಪಪ್ರಚಾರಕ್ಕೆ ಬಿವೈ ವಿಜಯೇಂದ್ರ ತೀವ್ರ ಆಕ್ಷೇಪ: ಸಿಎಂ ಜನತೆ ಕ್ಷಮೆಗೆ ಒತ್ತಾಯ