ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಕಸ್ತೂರ್ಬಾ ನಗರದ ನಿವಾಸಿಗಳಾಗಿರುವ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ನಡೆದಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. 8ನೇ ತರಗತಿ ಹಾಗೂ 6ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯರು, ಚಿತ್ರಕಲೆ ತರಗತಿಗೆ ಹೋಗಿ ಬರುವುದಾಗಿ ಹೇಳಿ ಶನಿವಾರ ಮಧ್ಯಾಹ್ನ ಮನೆಯಿಂದ ಹೊರಟಿದ್ದು, ಇದುವರೆಗೂ ವಾಪಸಾಗಿಲ್ಲ. ಹೀಗಾಗಿ ಸಿಸಿಟಿವಿ ದೃಶ್ಯಗಳೂ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಹುಡುಕಾಟ ನಡೆಸಲಾಗುತ್ತಿದೆ.
ಕಾಣೆಯಾದ ವಿದ್ಯಾರ್ಥಿಗಳ ಪೋಷಕರು ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ. ಡಿವೈಎಸ್ಪಿ ಗೀತಾ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಸಿಪಿಐ ಶಶಿಕಾಂತ್ ವರ್ಮಾ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ವಿದ್ಯಾರ್ಥಿನಿಯರ ಪತ್ತೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.