ಬೆಂಗಳೂರು : ಬೆಂಗಳೂರಲ್ಲಿ ಭಾರಿ ಅನಾಹುತ ಒಂದು ತಪ್ಪಿದ್ದು, ಬ್ರೇಕ್ ಫೇಲ್ ಆಗಿ ಬಿಎಂಟಿಸಿ ಬಸ್ ಒಂದು ಹಳ್ಳಕ್ಕೆ ನುಗ್ಗಿದೆ. ಆದರೆ ಬಸ್ ನಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿರುವ ಘಟನೆ ಬೆಂಗಳೂರಿನ ಆನೇಕಲ್ ನಲ್ಲಿ ಈ ಒಂದು ಅಪಘಾತ ಸಂಭವಿಸಿದೆ.
ಹೌದು ಬ್ರೇಕ್ ಫೇಲ್ ಆಗಿ ಹಳ್ಳಕ್ಕೆ ನುಗ್ಗಿದ ಬಿಎಂಟಿಸಿ ಬಸ್. ಮೆಜೆಸ್ಟಿಕ್ ನಿಂದ ಈ ಒಂದು ಬಸ್ ಆನೇಕಲ್ ಗೆ ತೆರಳುತ್ತಿತ್ತು. ಹರಪನಹಳ್ಳಿ ಪೊಲೀಸ್ ಕೆರೆಯ ಬಳಿ ಈ ಒಂದು ಅಪಘಾತ ಸಂಭವಿಸಿದೆ ಪ್ರಯಾಣಿಕರಿದ್ದ ಬಿಎಂಟಿಸಿ ಬಸ್ ಬ್ರೇಕ್ ಆಗಿದೆ ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೆ ಹಾನಿಯಾಗಿಲ್ಲ.