ಚಿಕ್ಕಮಗಳೂರು : ರಾಜ್ಯದಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆ ಈಗಾಗಲೇ ರಾಜ್ಯದ ಕೆಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಯಲ್ಲೋ ಘೋಷಣೆ ಮಾಡಿದೆ. ಅಲ್ಲದೆ ಚಿಕ್ಕಮಗಳೂರಲ್ಲಿ ಸಹ ಭಾರಿ ಮಳೆ ಸುರಿಯುತ್ತಿದ್ದು, 6 ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಭಾರಿ ಮಳೆ ಹಿನ್ನೆಲೆಯಲ್ಲಿ ಚಿಕ್ಕಮಂಗಳೂರು, ಕಳಸ, ಕೊಪ್ಪ, ಮೂಡಿಗೆರೆ, ಶೃಂಗೇರಿ ಹಾಗೂ ನರಸಿಂಹರಾಜಪುರ ತಾಲೂಕಿನ ಎಲ್ಲಾ ಶಾಲೆಗಳಿಗೆ ಪ್ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.