ಬೆಂಗಳೂರು : ಕರ್ನಾಟಕದ 36,000 ಮುಜರಾಯಿ ದೇವಾಲಯಗಳನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ಅಭಿಯಾನಕ್ಕೆ ಆಗಸ್ಟ್ 17 ರಂದು ಚಾಲನೆ ದೊರಕಿದೆ. ಪ್ರಸಾದ ವಿತರಣೆ ಸೇರಿದಂತೆ ಯಾವುದೇ ಉದ್ದೇಶಕ್ಕೂ ಪ್ಲಾಸ್ಟಿಕ್ ಬಳಕೆ ನಿಷಿದ್ಧ. ಪರ್ಯಾಯ ಪರಿಸರ ಸ್ನೇಹಿ ವಸ್ತುಗಳ ಬಳಕೆ ಕಡ್ಡಾಯ. ನಿಯಮ ಉಲ್ಲಂಘಿಸುವ ದೇವಾಲಯಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತೆ.
ರಾಜ್ಯದ ಎಲ್ಲ ದೇವಾಇನ್ಮುಂದೆ ಈ ದೇಗುಲಗಳಲ್ಲಿ ಪ್ರಸಾದ ವಿತರಣೆಗೆ ಅಥವಾ ಯಾವುದೇ ಉದ್ದೇಶಕ್ಕಾಗಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವಂತಿಲ್ಲ. ಆಗಸ್ಟ್ 15 ರಿಂದಲೇ ಪ್ಲಾಸ್ಟಿಕ್ ನಿಷೇಧವನ್ನು ಜಾರಿಗೆ ತರಲಾಗಿದ್ದು, ಇಂದು (ಆ. 17) ಅಧಿಕೃತವಾಗಿ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.
ಧಾರ್ಮಿಕ ದತ್ತಿ ಇಲಾಖೆಯ ನೇತೃತ್ವದಲ್ಲಿ, ಬಸವನಗುಡಿಯ ದೊಡ್ಡಗಣಪತಿ ದೇವಾಲಯದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಸಕ ರವಿಸುಬ್ರಮಣ್ಯ ಅವರು ಉಪಸ್ಥಿತರಿದ್ದರು.