ಬೆಂಗಳೂರು: ಕರ್ನಾಟಕ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರನ್ನಾಗಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಕೆಲ ದಿನಗಳ ಹಿಂದೆ ಆದೇಶಿಸಿತ್ತು. ಇಂದು ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಆದೇಶ ಮಾಡಿದೆ.
ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ದಿನೇಶ್ ಗೂಳಿಗೌಡ, ಉಪಾಧ್ಯಕ್ಷರು, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಇವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರಾಜ್ಯ ಸಚಿವರ ಸ್ಥಾನಮಾನದೊಂದಿಗೆ ರಾಜ್ಯ ಸಚಿವ ಸ್ಥಾನಮಾನಕ್ಕೆ ಅನ್ವಯಿಸುವ ಎಲ್ಲಾ ಸೌಲಭ್ಯಗಳನ್ನು ನೀಡುವಂತೆ ಆದೇಶಿಸಿದ್ದಾರೆ.
BREAKING: ದೇಶಾದ್ಯಂತ ಏರ್‌ಟೆಲ್ ನಂತರ ಜಿಯೋ, ವೊಡಾಫೋನ್-ಐಡಿಯಾ ನೆಟ್‌ವರ್ಕ್ ಡೌನ್: ಬಳಕೆದಾರರು ಪರದಾಟ
ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಹಣ್ಣು ನೀಡಿ ಕುಶಲೋಪರಿ ವಿಚಾರಣೆ