ಬೆಂಗಳೂರು : ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025 ರಲ್ಲಿ ಗಣತಿ ಕಾರ್ಯನಿರ್ವಹಿಸಿದ ಸಮೀಕ್ಷಾದಾರರಿಗೆ ಗೌರವಧನ ಪಾವತಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಉಲ್ಲೇಖ (1) ರ ಸರ್ಕಾರದ ಆದೇಶಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪ ಜಾತಿಗಳಿಗೆ ಸೇರಿದವರ ಪ್ರಾತಿನಿದ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸ್ಸುಗಳೊಂದಿಗೆ ವರದಿ ಸಲ್ಲಿಸಲು ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚಿಸಲಾಗಿರುತ್ತದೆ. ಈ ಸಂಬಂಧ ಸದರಿ ಆಯೋಗವು ದಿನಾಂಕ:27-03-2025 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮಧ್ಯಂತರ ವರದಿಯನ್ನು ಸಲ್ಲಿಸಿರುತ್ತದೆ. ಸದರಿ ಮಧ್ಯಂತರ ವರದಿಯಲ್ಲಿ ಕರ್ನಾಟಕ ರಾಜ್ಯದಲ್ಲಿರುವ ಪರಿಶಿಷ್ಟ ಜಾತಿ ಕುಟುಂಬಗಳ ಮನೆ-ಮನೆ ಸಮೀಕ್ಷೆ ನಡೆಸಲು ಶಿಫಾರಸ್ಸು ಮಾಡಲಾಗಿರುತ್ತದೆ.
ಗೌರವಾನ್ವಿತ ಹೆಚ್. ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಕುರಿತು ದತ್ತಾಂಶ ಸಂಗ್ರಹಿಸಲು ಸರ್ಕಾರದಿಂದ ನಡೆಸಲು ಉದ್ದೇಶಿಸಿರುವ ಸಮೀಕ್ಷಾ ಕಾರ್ಯವನ್ನು ಸರ್ಕಾರದ ಅಗತ್ಯ ಕಾರ್ಯವೆಂದು ಪರಿಗಣಿಸಿ, ಕರಾರುವಕ್ಕಾದ ಪ್ರಮಾಣೀಕೃತ ಮಾಹಿತಿಯನ್ನು ಪಡೆಯುವ ಸಲುವಾಗಿ ಸಮೀಕ್ಷಾ ಕಾರ್ಯಕ್ಕೆ ಅಗತ್ಯವಿರುವ ಶಿಕ್ಷಕರನ್ನು ಗಣತಿದಾರರನ್ನಾಗಿ (Enumerators) ಗುರುತಿಸಿ ನೇಮಕ ಮಾಡಲು ಉಲ್ಲೇಖ (2) ರಲ್ಲಿ ಆದೇಶಿಸಲಾಗಿರುತ್ತದೆ.
ಸದರಿ ಏಕ ಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ ಸರ್ಕಾರದ ವತಿಯಿಂದ ನಡೆಸಲಾಗುತ್ತಿರುವ ಸಮೀಕ್ಷೆಗೆ ಅವಶ್ಯವಿರುವ ಅನುದಾನವನ್ನು ಆರ್ಥಿಕ ಇಲಾಖೆ ಟಿಪ್ಪಣಿ ಸಂಖ್ಯೆ: ಆಇ 352 ವೆಚ್ಚ-3/ 2025 2:24-04-2025 0 22 :2225-01-796-0-02 ರಡಿ 2025-26 ನೇ ಸಾಲಿನಲ್ಲಿ ಒದಗಿಸಲಾಗಿರುವ ಒಟ್ಟು ರೂ.7075.00 ಲಕ್ಷಗಳ ಅನುದಾನದಿಂದ ಸಮೀಕ್ಷೆಗೆ ಅವಶ್ಯಕವಿರುವ ಅನುದಾನ ರೂ.9149.53 ಲಕ್ಷಗಳನ್ನು ಬಳಸಿಕೊಳ್ಳುವಂತೆ ಹಾಗೂ ಈ ಲೆಕ್ಕ ಶೀರ್ಷಿಕೆಯಡಿ ಅನುದಾನದ ಕೊರತೆ ಉಂಟಾದಲ್ಲಿ ಪೂರಕ ಅಂದಾಜಿನಲ್ಲಿ ಒದಗಿಸಲು ಕ್ರಮವಹಿಸಲಾಗುವುದೆಂದು ಉಲ್ಲೇಖ (3) ರ ಪತ್ರದಲ್ಲಿ ತಿಳಿಸಲಾಗಿರುತ್ತದೆ.
ಮುಂದುವರೆದು, ಉಲ್ಲೇಖ (4) ರಲ್ಲಿ ಕಾರ್ಯದರ್ಶಿಗಳು, ಏಕ ಸದಸ್ಯ ವಿಚಾರಣಾ ಆಯೋಗ, ಬೆಂಗಳೂರು ರವರು ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗದಿಂದ ದಿನಾಂಕ:27-03-2025 ರಂದು ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿರುತ್ತದೆ.