ಬೆಂಗಳೂರು: ನಗರದ ವಿಲ್ಸನ್ ಗಾರ್ಡನ್ ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡಿದ್ದಂತ ಘಟನೆ ಆಗಸ್ಟ್.15ರಂದು ನಡೆದಿತ್ತು. ಈ ಘಟನೆಯಲ್ಲಿ ಗಾಯಗೊಂಡಿದ್ದಂತ ಇಬ್ಬರು ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
ಆಗಸ್ಟ್.15ರಂದು ಬೆಂಗಳೂರಿನ ಚನ್ನಯ್ಯನಪಾಳ್ಯದಲ್ಲಿ ಸಿಲಿಂಡರ್ ಸ್ಪೋಟ ಘಟನೆ ನಡೆದಿತ್ತು. ಅಂದೇ ತೀವ್ರವಾಗಿ ಗಾಯಗೊಂಡಿದ್ದಂತ ಬಾಲಕ ಮುಬಾರಕ್ ಸ್ಥಳದಲ್ಲೇ ಸಾವನ್ನಪ್ಪಿದ್ದನು. ಗಂಭೀರವಾಗಿ ಗಾಯಗೊಂಡಿದ್ದಂತ ತಾಯಿ, ಪುತ್ರಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.
ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ತಾಯಿ, ಪುತ್ರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಸುಟ್ಟಗಾಯಗಳ ಚಿಕಿತ್ಸಾ ವಿಭಾಗದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ತಾಯಿ ಕಸ್ತೂರಿ(28) ಹಾಗೂ ಪುತ್ರಿ ಕಯಾಲ್(8) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೀಗಾಗಿ ಸಿಲಿಂಡರ್ ಸ್ಪೋಟ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆಯಾದಂತೆ ಆಗಿದೆ.
ನಾಳೆ, ನಾಡಿದ್ದು ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ರಾಜ್ಯದ ಜನತೆಗೆ ಗುಡ್ ನ್ಯೂಸ್: ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ECG ವ್ಯವಸ್ಥೆ