Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೀನಿನ ಈ ಭಾಗ ತಿನ್ನುವುದರಿಂದ ಸಿಗಲಿವೆ ಹಲವು ಪ್ರಯೋಜನಗಳು.!

31/03/2026 10:05 AM

ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕ-ಇರಾನ್ ಯುದ್ಧದ ಬಿಸಿ: ಭಾರತಕ್ಕೆ ತೈಲ, ಗ್ಯಾಸ್ ಹೊತ್ತ 10 ವಿದೇಶಿ ಹಡಗುಗಳು ಜಲಸ್ತಂಭನ!

31/03/2026 10:00 AM

ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿ ಆಡಿಯೋ ಲೀಕ್? : 35 ಮಂದಿಗೆ ನ್ಯಾಯಾಲಯದಿಂದ ಸಮನ್ಸ್

31/03/2026 9:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯಾದ್ಯಂತ ಮುಂದುವರೆದ ಮಳೆಯ ಆರ್ಭಟ : ಇಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ | School holiday
KARNATAKA

BIG NEWS : ರಾಜ್ಯಾದ್ಯಂತ ಮುಂದುವರೆದ ಮಳೆಯ ಆರ್ಭಟ : ಇಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ | School holiday

By kannadanewsnow5719/08/2025 6:03 AM

ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇಂದು ಕೂಡ ವರುಣನ ಆರ್ಭಟ ಮುಂದುವರೆಯುವ ಕಾರಣ ರಾಜ್ಯದ ಕೆಲ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ 11 ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಮುಂಡಗೋಡು ಹೊರತುಪಡಿಸಿ ಜಿಲ್ಲೆಯ 11 ತಾಲ್ಲೂಕಿನ ಶಾಲೆಗಳು, ಪಿಯು ಕಾಲೇಜುಗಳಿಗೆ ಇಂದು ರಜೆಯನ್ನು ಘೋಷಿಸಲಾಗಿದೆ.
ಈ ಸಂಬಂಧ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದು, ಮಂಗಳವಾರ ಕಾರವಾರ, ಅಂಕೋಲಾ, ಕುಮಟಾ, ಶಿರಸಿ, ಹೊನ್ನಾವರ, ಯಲ್ಲಾಪುರ, ಜೋಯಿಡಾ, ಹಳಿಯಾಳ, ಸಿದ್ದಾಪುರ, ಭಟ್ಕಳ, ದಾಂಡೇಲಿ ತಾಲ್ಲೂಕಿನ ಶಾಲಾ-ಕಾಲೇಜಿಗೆ ರಜೆಯನ್ನು ನೀಡಲಾಗಿದೆ ಎಂದಿದ್ದಾರೆ.

ಬೆಳಗಾವಿ ಜಿಲ್ಲೆಯ 7 ತಾಲ್ಲೂಕಿನ ಶಾಲೆಗಳಿಗೆ ರಜೆ

ಬೆಳಗಾವಿ ಜಿಲ್ಲೆಯ 7 ತಾಲ್ಲೂಕಿನ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಬೆಳಾಗವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ರಾಮದುರ್ಗ, ಸವದತ್ತಿ, ಚಿಕ್ಕೋಡಿ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ಮಳೆಯ ಕಾರಣ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ರಜೆ ನೀಡಿ ಆದೇಶಿಸಿದ್ದಾರೆ.

ಹಾಸನ ಜಿಲ್ಲೆಯ ಈ ತಾಲ್ಲೂಕಿನ ಶಾಲೆಗಳಿಗೆ ರಜೆ

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಹೀಗಾಗಿ ಹಾಸನ ಜಿಲ್ಲೆಯ ಸಕಲೇಶಪುರ, ಅರಕಲಗೋಡು ತಾಲ್ಲೂಕಿನ ಅಂಗನವಾಡಿ, ಶಾಲೆಗಳಿಗೆ ಇಂದು ರಜೆಯನ್ನು ನೀಡಲಾಗಿದೆ.

ಬೇಲೂರು ತಾಲ್ಲೂಕಿನ ಅರೆಹಳ್ಳಿ, ಬಿಕ್ಕೋಡು ಹೋಬಳಿಯ ಶಾಲೆಗಳಿಗೆ, ಆಲೂರು ತಾಲ್ಲೂಕಿನ ಕೆ.ಹೊಸಕೋಟೆ, ಪಾಳ್ಯ ಹೋಬಳಿಯ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ಹಾಸನ ಜಿಲ್ಲೆಯ 2 ತಾಲ್ಲೂಕಿನ ನಾಲ್ಕು ಹೋಬಳಿಯ ಅಂಗನವಾಡಿ, ಶಾಲೆಗಳಿಗೆ ಮಾತ್ರವನೇ ನಾಳೆ ಮಳೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ಡಿಸಿ ಲತಾಕುಮಾರಿ ರಜೆ ನೀಡಿ ಆದೇಶಿಸಿದ್ದಾರೆ.

ಧಾರವಾಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಧಾರವಾಡ ಜಿಲ್ಲೆಯಲ್ಲೂ ಮಳೆಯ ಆರ್ಭಟ ಹೆಚ್ಚಾಗಿದೆ. ಹೀಗಾಗಿ ಧಾರವಾಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆಯನ್ನು ನೀಡಿ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಆದೇಶಿಸಿದ್ದಾರೆ. ಇಂದು ಧಾರವಾಡ ಜಿಲ್ಲೆಯ ಅಂಗನವಾಡಿ, ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಿಗೆ ರಜೆ

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಇಂದು ರಜೆ ಘೋಷಿಸಿ ಡಿಸಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.

ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ ಜಿಲ್ಲೆಯಲ್ಲೂ ಮಳೆಯ ಆರ್ಭಟ ಮುಂದುವರೆದಿದ್ದು, ಇಂದು ಉಡುಪಿ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಬೀದರ್ ಜಿಲ್ಲೆ ಔರಾದ್ ತಾಲೂಕು

ಬೀದರ್ ಜಿಲ್ಲೆ ಔರಾದ್ ತಾಲೂಕಿನಲ್ಲಿ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ಅಂಗನವಾಡಿ, ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಆದೇಶಿಸಿದ್ದಾರೆ.

BIG NEWS: Rain continues across the state: Holiday declared for schools and colleges in these 6 districts today | School holiday
Share. Facebook Twitter LinkedIn WhatsApp Email

Related Posts

ಮೀನಿನ ಈ ಭಾಗ ತಿನ್ನುವುದರಿಂದ ಸಿಗಲಿವೆ ಹಲವು ಪ್ರಯೋಜನಗಳು.!

31/03/2026 10:05 AM1 Min Read

ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿ ಆಡಿಯೋ ಲೀಕ್? : 35 ಮಂದಿಗೆ ನ್ಯಾಯಾಲಯದಿಂದ ಸಮನ್ಸ್

31/03/2026 9:58 AM2 Mins Read

ALERT : ಮಕ್ಕಳಿಗೆ `ಡೈಪರ್’ ಬಳಸುವುದು ಸುರಕ್ಷಿತವೇ? ಪೋಷಕರು ತಿಳಿಯಲೇಬೇಕಾದ ವಿಷಯಗಳಿವು.!

31/03/2026 9:49 AM2 Mins Read
Recent News

ಮೀನಿನ ಈ ಭಾಗ ತಿನ್ನುವುದರಿಂದ ಸಿಗಲಿವೆ ಹಲವು ಪ್ರಯೋಜನಗಳು.!

31/03/2026 10:05 AM

ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕ-ಇರಾನ್ ಯುದ್ಧದ ಬಿಸಿ: ಭಾರತಕ್ಕೆ ತೈಲ, ಗ್ಯಾಸ್ ಹೊತ್ತ 10 ವಿದೇಶಿ ಹಡಗುಗಳು ಜಲಸ್ತಂಭನ!

31/03/2026 10:00 AM

ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿ ಆಡಿಯೋ ಲೀಕ್? : 35 ಮಂದಿಗೆ ನ್ಯಾಯಾಲಯದಿಂದ ಸಮನ್ಸ್

31/03/2026 9:58 AM

ALERT : ಮಕ್ಕಳಿಗೆ `ಡೈಪರ್’ ಬಳಸುವುದು ಸುರಕ್ಷಿತವೇ? ಪೋಷಕರು ತಿಳಿಯಲೇಬೇಕಾದ ವಿಷಯಗಳಿವು.!

31/03/2026 9:49 AM
State News
KARNATAKA

ಮೀನಿನ ಈ ಭಾಗ ತಿನ್ನುವುದರಿಂದ ಸಿಗಲಿವೆ ಹಲವು ಪ್ರಯೋಜನಗಳು.!

By kannadanewsnow5731/03/2026 10:05 AM KARNATAKA 1 Min Read

ಇಂದಿನ ಸಮಾಜದಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಹೆಚ್ಚಾಗಿದೆ. ಈ ಸಂದರ್ಭದಲ್ಲಿ, ಅನೇಕ ಜನರು ತಮ್ಮ ಆಹಾರದಲ್ಲಿ ಮಟನ್ ಮತ್ತು ಕೋಳಿ…

ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿ ಆಡಿಯೋ ಲೀಕ್? : 35 ಮಂದಿಗೆ ನ್ಯಾಯಾಲಯದಿಂದ ಸಮನ್ಸ್

31/03/2026 9:58 AM

ALERT : ಮಕ್ಕಳಿಗೆ `ಡೈಪರ್’ ಬಳಸುವುದು ಸುರಕ್ಷಿತವೇ? ಪೋಷಕರು ತಿಳಿಯಲೇಬೇಕಾದ ವಿಷಯಗಳಿವು.!

31/03/2026 9:49 AM

ರಾಜ್ಯದಲ್ಲಿ `ಆಟೋ ಎಲ್‌ಪಿಜಿ’ ಕೊರತೆ ಇಲ್ಲ : ಸರ್ಕಾರದಿಂದ ಮಹತ್ವದ ಪ್ರಕಟಣೆ ! ​

31/03/2026 9:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.