ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಸಮುದಾಯದವರಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಆಗಸ್ಟ್ 19 ರ ಇಂದು ಮಹತ್ವದ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ.
ಈ ಕುರಿತಂತೆ ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಆರ್.ಚಂದ್ರಶೇಖರ್ ಮಾಹಿತಿ ನೀಡಿದ್ದು, ದಿನಾಂಕ 19-08-2025ರ ಮಂಗಳವಾರ ಸಂಜೆ 5 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರಲ್ಲಿ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣ ವಾಗಿ ರುವ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ವಿಚಾರ ಮಂಗಳವಾರದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದ್ದು, ನ್ಯಾ.ನಾಗಮೋಹನ್‌ದಾಸ್ ಆಯೋಗದ ವರದಿಯಲ್ಲಿನ ಮೀಸಲಾತಿ ವರ್ಗೀಕರಣದ ಕುರಿತು ಅಪಸ್ವರ ಕೇಳಿ ಬಂದಿರುವ ಹಿನ್ನೆಲೆ ಯಲ್ಲಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಬಗ್ಗೆ ಕುತೂಹಲ ಉಂಟಾಗಿದೆ.
ನಿವೃತ್ತ ನ್ಯಾ.ನಾಗಮೋಹನ್‌ದಾಸ್ ಅವರ ಆಯೋಗವು ತನ್ನ ವರದಿಯಲ್ಲಿ 101 ಪರಿಶಿಷ್ಟ ಜಾತಿಗಳನ್ನು ಐದು ಗುಂಪುಗಳಾಗಿ ವರ್ಗೀಕರಣ ಮಾಡಿ ಶೇ.17 ರಷ್ಟು ಮೀಸಲಾತಿ ಹಂಚಿಕೆ ಮಾಡಿದೆ.