ಬೆಂಗಳೂರು : ವಿಧಾನಸಭೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅವರು ಸಾಲಿನ ಕರ್ನಾಟಕ ಸಹಕಾರ ಸಂಘಗಳ(ತಿದ್ದುಪಡಿ) ವಿಧೇಯಕ ಮಂಡಿಸಿದ್ದು, ಸದನ ಅಂಗೀಕಾರ ಮಾಡಿತು.
ಸಹಕಾರಿ ಸಂಘಗಳ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಕಲ್ಪಿಸುವುದು ಹಾಗೂ ನಾಮನಿರ್ದೇಶನ ಮಾಡುವಂತಹ ಅವಕಾಶ ಹೊಂದಿರುವ ಕಾನೂನನ್ನು ರೂಪಿಸಿದೆ. 2025ನೇ ಸಾಲಿನ ಕರ್ನಾಟಕ ಸಹಕಾರ ಸಂಘಗಳ(ತಿದ್ದುಪಡಿ) ವಿಧೇಯಕಕ್ಕೆ ಸೋಮವಾರ ವಿಧಾನಸಭೆಯಲ್ಲಿ ಅಂಗೀಕಾರ ದೊರೆಯಿತು. ಪ್ರತಿಪಕ್ಷ ಸದಸ್ಯರ ಆಕ್ಷೇಪ, ಆಗ್ರಹಗಳ ನಡುವೆ ಸರ್ಕಾರ ಧ್ವನಿಮತದಿಂದ ವಿಧೇಯಕಕ್ಕೆ ಒಪ್ಪಿಗೆ ಪಡೆದುಕೊಂಡಿತು.
2024ರಲ್ಲಿ ರಾಜ್ಯಪಾಲರಿಂದ ತಿರಸ್ಕೃತಗೊಂಡಿದ್ದ ವಿಧೇಯಕಕ್ಕೆ ತಿದ್ದುಪಡಿ ತಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮಂಡಿಸಿ ಪರ್ಯಾಲೋಚನೆ ಪ್ರಕ್ರಿಯೆ ನಡೆಸಿದರು. ಪ್ರಾಥಮಿಕ ಸಹಕಾರ ಸಂಘ, ಹಾಲು ಉತ್ಪಾದಕರ ಸಹಕಾರ ಸಂಘ ಮತ್ತು ಇತರ ಪ್ರಾಥಮಿಕ ನೆರವು ಪಡೆದ ಸಹಕಾರ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣಾ ಪ್ರಕ್ರಿಯೆಯಲ್ಲಿ ಎಸ್‌ಸಿ/ಎಸ್‌ಟಿ ಇತರ ಹಿಂದುಳಿದ ವರ್ಗ, ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲಾಗುತ್ತಿದೆ.