ಬೆಂಗಳೂರು : ವಿಧಾನಸಭೆಯಲ್ಲಿ 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕವನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಮಂಡಿಸಿದ್ದಾರೆ.
ವಿಧಾನಸಭೆಯಲ್ಲಿ 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕವನ್ನು ಸ್ಪೀಕರ್ ಯು.ಟಿ. ಖಾದರ್ ಅಂಗೀಕರಿಸಿದ್ದಾರೆ.
ಈ ವಿಧೇಯಕವು ಬಿಬಿಎಂಪಿಯನ್ನು ಐದು ಪಾಲಿಕೆಗಳಾಗಿ ವಿಭಜಿಸುವ ಮತ್ತು ವಾರ್ಡ್‌ಗಳ ಮರುವಿಂಗಡಣೆಯನ್ನು ಒಳಗೊಂಡಿದೆ. ಬಿಬಿಎಂಪಿಯನ್ನು ಐದು ಪ್ರತ್ಯೇಕ ಪಾಲಿಕೆಗಳಾಗಿ ವಿಭಜಿಸುವ ಮೂಲಕ ಆಡಳಿತವನ್ನು ವಿಕೇಂದ್ರೀಕರಿಸುವುದು ಮತ್ತು ಸ್ಥಳೀಯ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರಗಳನ್ನು ಒದಗಿಸುವುದು ಇದರ ಉದ್ದೇಶವಾಗಿದೆ.